ಹನೂರು: ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಜಮಾವಣೆಗೊಂಡ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಮಾತನಾಡಿ, ‘ಮಾರ್ಟಳ್ಳಿ ಪಿಡಿಒ ಸಾರ್ವಜನಿಕರ ಸೇವೆಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಪ್ರಶ್ನೆ ಕೇಳುವವರ ಮೇಲೆ ದಬ್ಬಾಳಿಕೆ ಮಾಡುತ್ತಾರೆ. ಇವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಉದ್ಯೋಗ ನೀಡುತ್ತಿಲ್ಲ: ‘ನರೇಗಾ ಯೋಜನೆ ಅಡಿಯಲ್ಲಿ ಸ್ಥಳೀಯ ನಿವಾಸಿಗಳಿಗೆ ನೂರು ದಿನ ಕೆಲಸ ಕೊಡಬೇಕೆಂಬ ನಿಯಮ ಇದ್ದರೂ, ಸ್ಥಳೀಯರು ಕೆಲಸಕ್ಕೆ ಮನವಿ ಮಾಡಿದರು ಅಧಿಕಾರಿಗಳು ತಾತ್ಸಾರ ಮನೋಭಾವನೆ ತಾಳಿ ಕೆಲಸ ನೀಡದೆ ಅಲೆದಾಡಿಸುತ್ತಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳಿಗೆ ಕೂಲಿ ಕೆಲಸ ಸಿಗದೆ ಗುಳೇ ಹೊರಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

ಸ್ವಚ್ಛತೆಗೆ ಪ್ರಾಮುಖ್ಯತೆ ಕೊಡಲಿ: ‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೈರ್ಮಲ್ಯ ತಾಂಡವ ಮಾಡುತ್ತಿದ್ದು, ಎಲ್ಲೆಡೆ ಸಾಂಕ್ರಾಮಿಕ ರೋಗದ ಭೀತಿ ಆವರಿಸಿದೆ. ಮೊದಲು ಇಲ್ಲಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಬ್ಬಾಳಿಕೆ ನಿಲ್ಲಿಸಿ ಸ್ವಚ್ಛತ ಕಡೆ ಗಮನ ನೀಡಲಿ’ ಎಂದು ಆಗ್ರಹಿಸಿದರು.

ಜಿಲ್ಲಾ ಉಪಾಧ್ಯಕ್ಷ ಗೌಡೇ ಗೌಡ, ತಾಲೂಕು ಗೌರವಾಧ್ಯಕ್ಷ ರಾಜಣ್ಣ, ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೂoಗುಡಿ, ತಾಲೂಕು ಮಹಿಳಾ ಘಟಕದ ಅಧ್ಯಕ್ಷ ರಾಜಮಣಿ, ಪಳನಿ ಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.