ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ: ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಆ.21ರಂದು

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ
Published 24 ಜೂನ್ 2024, 15:59 IST
Last Updated 24 ಜೂನ್ 2024, 15:59 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರ ಆದ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು.

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರತಿ ವರ್ಷ ನಡೆಸುವ ಉಚಿತ ಸಾಮೂಹಿಕ ವಿವಾಹವನ್ನು ಈ ಬಾರಿ ಆ.21ರಂದು ನಡೆಸುವ ಸಂಬಂಧ ವಿವರವಾಗಿ ಚರ್ಚಿಸಲಾಯಿತು.

ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಮಾಸ್ಟರ್ ಪ್ಲಾನ್‌ನಂತೆ ವಿವಿಧ ಕಡೆಗಳಲ್ಲಿ ಹೊಸದಾಗಿ ಕಾಮಗಾರಿ ನಿರ್ವಹಣೆ ಸಂಬಂಧ ವಿಸೃತ ಚರ್ಚೆ ನಡೆಸಲಾಯಿತು. ಬೆಟ್ಟಕ್ಕೆ ಸಂಪರ್ಕ ರಸ್ತೆ, ಮಲೆ ಮಹದೇಶ್ವರಬೆಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಶಾಲೆಗಳಿಗೆ ಪ್ರಾಧಿಕಾರದಿಂದ ಮೂಲಸೌಕರ್ಯ, ಪ್ರಾಧಿಕಾರಕ್ಕೆ ವಿವಿಧ ಹಕ್ಕು ಬಾದ್ಯತೆಗಳು, ಮುಡಿ ಕಾಣಿಕೆ ಕುರಿತು ಚರ್ಚೆ ನಡೆಯಿತು.

ದಾಸೋಹ, ಲಾಡು, ಪೂಜಾ ವಿಭಾಗಕ್ಕೆ ಬೇಕಾದ ಸಾಮಾಗ್ರಿಗಳ ಸರಬರಾಜು, ವಾಹನ ಪ್ರವೇಶ ಶುಲ್ಕ, ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತವಾಗಿ ಘೋಷಿಸುವ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ತಪಾಸಣಾ ಕೇಂದ್ರ ತೆರೆಯುವ ಕುರಿತು ಪ್ರಸ್ತಾಪಿಸಲಾಯಿತು.

ಪ್ರಾಧಿಕಾರಕ್ಕೆ ಸೇರಿದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ 512 ಕೊಠಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ಸಂಬಂಧ ಪ್ರಗತಿ ವಿವರವನ್ನು ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೂ ಮೊದಲೇ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.

ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಎಚ್.ಎಂ.ಗಣೇಶ್ ಪ್ರಸಾದ್, ಸಿ.ಎನ್.ಮಂಜೇಗೌಡ, ಡಾ.ಡಿ.ತಿಮ್ಮಯ್ಯ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಎಚ್.ವಿ. ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಎಸ್‌ಪಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಉಪವಿಭಾಗಾಧಿಕಾರಿ ಮಹೇಶ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಷ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮಹೇಶ್ ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT