ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 17ರಂದು ಮೆಗಾ ಲಸಿಕಾ ಮೇಳ

Last Updated 14 ಸೆಪ್ಟೆಂಬರ್ 2021, 16:38 IST
ಅಕ್ಷರ ಗಾತ್ರ

ಚಾಮರಾಜನಗರ: ಇದೇ 17ರಂದು ರಾಜ್ಯದಾದ್ಯಂತ ಮೆಗಾ ಕೋವಿಡ್‌ ಲಸಿಕಾ ಮೇಳ ಹಮ್ಮಿಕೊಂಡಿರುವುದರಿಂದ ಜಿಲ್ಲೆಯಲ್ಲೂ ಮೇಳ ಆಯೋಜಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಅಂದು ಹೆಚ್ಚಿನ ಜನರು ಲಸಿಕೆ ಪಡೆಯಲು ಅವಕಾಶವಾಗುವಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಸೂಚಿಸಿದ್ದಾರೆ.

ಮಂಗಳವಾರ ನಡೆದ ಸರ್ಕಾರಿ, ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳ ಮುಖ್ಯಸ್ಥರು, ಪ್ರತಿನಿಧಿಗಳು, ಆರೋಗ್ಯ ಅಧಿಕಾರಿಗಳು, ಲಸಿಕಾಕರಣದ ನೋಡೆಲ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ ಲಸಿಕಾ ಮೇಳದಂದು ಜಿಲ್ಲೆಯಲ್ಲಿ 50 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು, ನರ್ಸಿಂಗ್ ಹೋಂಗಳು, ಇತರೆ ಸ್ಥಳಗಳಲ್ಲಿ ಮೆಗಾ ಲಸಿಕಾ ಮೇಳದ ಅಂಗವಾಗಿ ಲಸಿಕಾ ಕೇಂದ್ರಗಳನ್ನು ತೆರೆದು ಜನರಿಗೆ ಲಸಿಕೆ ನೀಡಲಾಗುತ್ತದೆ’ ಎಂದರು.

ಲಸಿಕಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಗ್ರಾಮೀಣ ಪ್ರದೇಶದಲ್ಲಿ 220, ನಗರ ಪ್ರದೇಶದಲ್ಲಿ 50 ಹಾಗೂ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂ, ಸಂಸ್ಥೆಗಳಲ್ಲಿ 23 ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಪ್ರತೀ ತಾಲ್ಲೂಕಿಗೂ ಲಸಿಕೆ ನೀಡುವ ಮೊಬೈಲ್ (ಸಂಚಾರಿ) ಘಟಕಗಳನ್ನು ನೀಡಲಾಗುತ್ತಿದೆ. ಈ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ನಿಗದಿತ ಗುರಿ ಅನುಸಾರ ಲಸಿಕೆ ನೀಡಬೇಕು ಎಂದು ಅವರು ಸೂಚಿಸಿದರು.

ಹೆಚ್ಚಿನ ಜನರು ಲಸಿಕೆ ಪಡೆಯಲು ಅನುಕೂಲವಾಗುವಂತೆ ಪ್ರಚಾರ ಕೈಗೊಳ್ಳಬೇಕು. ನಗರ, ಪಟ್ಟಣ, ಗ್ರಾಮಾಂತರ ಭಾಗಗಳಲ್ಲಿಯೂ ಲಸಿಕೆ ಮೇಳದ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿಶ್ವೇಶ್ವರಯ್ಯ, ಆರ್.ಸಿ.ಎಚ್ ಅಧಿಕಾರಿ ಡಾ. ಅಂಕಪ್ಪ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ.ನಾಗರಾಜು ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT