ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಮಧ್ಯವರ್ತಿಗಳಿಂದ ಪ್ರತಿಭಟನೆ, ರೈತರಿಂದಲ್ಲ: ಸಚಿವೆ ಶೋಭಾ ಕರಂದ್ಲಾಜೆ

Last Updated 16 ಆಗಸ್ಟ್ 2021, 14:25 IST
ಅಕ್ಷರ ಗಾತ್ರ

ಚಾಮರಾಜನಗರ: ಕೇಂದ್ರ ಸರ್ಕಾರ ರೂಪಿಸಿರುವ ಎಪಿಎಂಸಿ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಪಂಜಾಬ್‌, ಹರಿಯಾಣದ ಮಧ್ಯವರ್ತಿಗಳೇ ವಿನಾ ರೈತರಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮವಾರ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಕೂಡ ರಾಜಕೀಯ ಪ್ರೇರಿತ. ಪ್ರತಿಭಟನಕಾರ ಆರೋಪಗಳಲ್ಲಿ ಹುರುಳಿಲ್ಲ’ ಎಂದರು.

ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಹೋರಾಟ ಮಾಡುತ್ತಿರುವವರು ರೈತರಲ್ಲ. ಪಂಜಾಬ್‌, ಹರಿಯಾಣಗಳ ಎಪಿಎಂಸಿಯ ಮಧ್ಯವರ್ತಿಗಳು. ಎಪಿಎಂಸಿಯಲ್ಲಿ ರೈತರ ಉತ್ಪನ್ನಗಳಿಂದ ಅವರಿಗೆ ಕಮಿಷನ್‌ ಹೋಗುತ್ತಿತ್ತು. ಸರ್ಕಾರ ಎಪಿಎಂಸಿ ಕಾಯ್ದೆ ಜಾರಿಗೆ ತಂದ ನಂತರ ರೈತರೇ ನೇರವಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ಆರಂಭಿಸಿದರು. ಮಧ್ಯವರ್ತಿಗಳ ಲಾಬಿ ಪ್ರತಿಭಟನೆಯ ಹಿಂದೆ ಇದೆ’ ಎಂದರು.

ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತದಲ್ಲಿ ಮೃತಪ‍ಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೀರಾ ಎಂದು ಕೇಳಿದ್ದಕ್ಕೆ, ‘ರಾಜ್ಯ ಸರ್ಕಾರ ಈಗಾಗಲೇ ಪರಿಹಾರ ನೀಡಿದೆ’ ಎಂದಷ್ಟೇ ಹೇಳಿದರು.

ಕಣ್ಣೆದುರಿಗೆ ದುರಂತ ನಡೆದಿದ್ದರೂ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಆಮ್ಲಜನಕ ಕೊರತೆಯಿಂದ ದೇಶದಲ್ಲಿ ಯಾರೊಬ್ಬರೂ ಸತ್ತಿಲ್ಲ ಎಂದು ಹೇಳಿಕೆ ನೀಡಿದೆಯಲ್ಲಾ ಎಂದ ಕೇಳಿದ್ದಕ್ಕೆ, ‘ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆಯಷ್ಟೆ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT