ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತರು ಕಾಂಗ್ರೆಸ್‌ನೊಂದಿಗೆ ಇದ್ದಾರೆ: ನಾಗೇಂದ್ರ

Published 16 ನವೆಂಬರ್ 2023, 6:08 IST
Last Updated 16 ನವೆಂಬರ್ 2023, 6:08 IST
ಅಕ್ಷರ ಗಾತ್ರ

ಚಾಮರಾಜನಗರ: ‘ಬಿ.ವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ತಕ್ಷಣ ಲಿಂಗಾಯತ ಮತಗಳೆಲ್ಲ ಬಿಜೆಪಿಗೆ ಹೋಗುವುದಿಲ್ಲ. ಲಿಂಗಾಯತರು ಬಿಜೆಪಿಗಿಂತ ಕಾಂಗ್ರೆಸ್ ಪಕ್ಷದೊಂದಿಗೆ ಗಟ್ಟಿಯಾಗಿದ್ದಾರೆ’ ಎಂದು ಯುವಜನ ಸೇವಾ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಬುಧವಾರ ಹೇಳಿದರು.

ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಲಿಂಗಾಯತ ನಾಯಕರಿದ್ದಾರೆ. ಎಲ್ಲಾ ಚುನಾವಣೆಗಳಲ್ಲೂ ಲಿಂಗಾಯತರು ಕಾಂಗ್ರೆಸ್‌ಗೆ ಭದ್ರ ಬುನಾದಿಯಾಗಿದ್ದಾರೆ’ ಎಂದರು.

‘ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕವಾಗಿದೆ ಎಂದು ಕಾಂಗ್ರೆಸ್‌ನ ಒಂದು ಮತವೂ ಬಿಜೆಪಿಗೆ ಹೋಗುವುದಿಲ್ಲ. ರಾಜ್ಯಾಧ್ಯಕ್ಷರ ಆಯ್ಕೆ ನಂತರ ಬಿಜೆಪಿಯಲ್ಲಿ ಗೊಂದಲ, ಅಪಸ್ವರ ಎದ್ದಿದೆ. ಅದು ಅವರ ಪಕ್ಷದ ಆಂತರಿಕ ವಿಚಾರ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

28 ಸ್ಥಾನಗಳಲ್ಲೂ ಜಯ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನೂ ಗೆಲ್ಲಲಿದ್ದೇವೆ. ಪಂಚ ಗ್ಯಾರಂಟಿ ಯೋಜನೆ ಜಾರಿಯಾದ ನಂತರ ರಾಜ್ಯದ ಜನರು ಖುಷಿಯಲ್ಲಿದ್ದಾರೆ’ ಎಂದು ಹೇಳಿದರು.

ಕ್ರೀಡಾಂಗಣದ ಅಭಿವೃದ್ಧಿ: ಡಾ.ಬಿ.ಆರ್.ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ 23 ವರ್ಷಗಳಾದರೂ ಪೂರ್ಣವಾಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಅಧಿಕಾರ ಸ್ವೀಕರಿಸಿದ ನಂತರ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. ನಮ್ಮ ಕ್ರೀಡಾಪಟುಗಳು ಈಗ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಎಲ್ಲವನ್ನೂ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT