ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ವಿಳಂಬ ಮಾಡದೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಹವಾಮಾನ, ಕುಡಿಯುವ ನೀರು ನಿರ್ವಹಣೆ, ಜಾನುವಾರುಗಳ ಮೇವು ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ರಸ್ತಾವಗಳು ಮತ್ತು ಇತರೆ ಇಲಾಖೆಗಳ ವಿಷಯಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಧಿಕಾರಿಗಳು ಪ್ರಾಶಸ್ತ್ಯ ನೀಡಬೇಕು. ಸಮಸ್ಯಾತ್ಮಕ ಗ್ರಾಮಗಳಲ್ಲಿ ಸಮಸ್ಯೆ ತಲೆದೋರಿದರೆ ಕೂಡಲೇ ಟ್ಯಾಂಕರ್ಗಳ ಮೂಲಕ ಅಥವಾ ಪರ್ಯಾಯ ಮೂಲಗಳ ಮೂಲಕ ನೀರು ಪೂರೈಸಬೇಕು ಎಂದು ನಿರ್ದೇಶನ ನೀಡಿದರು.

ಜೆಜೆಎಂ ಕಾಮಗಾರಿ ಪೂರ್ಣಗೊಳ್ಳದಿದ್ದರೂ ಹೊಂಗನೂರು, ಇರಸವಾಡಿ, ಕೆಂಪನಪುರ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ದೂರಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಜಗದೀಶ್ ಅವರನ್ನು ಪ್ರಶ್ನಿಸಿದ ಸಚಿವರು, ‘ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲಿ ಕೈಗೊಂಡಿರುವ ಕಾಮಗಾರಿ ಸಂಪೂರ್ಣ ಮುಕ್ತಾಯವಾದ ಬಳಿಕವಷ್ಟೆ ಆಯಾ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಬೇಕು. ಕಾಮಗಾರಿ ಪೂರ್ಣಗೊಳ್ಳದಿದ್ದರೂ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸುವಂತಿಲ್ಲ. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಿಸಿ ಕ್ರಮವಹಿಸಬೇಕು’ ಎಂದು ನಿರ್ದೇಶನ ನೀಡಿದರು.

ನಗರ, ಪಟ್ಟಣ ಪ್ರದೇಶಗಳಲ್ಲಿಯೂ ನೀರು ಸರಬರಾಜಿನಲ್ಲಿ ತೊಂದರೆಯಾಗಬಾರದು. ಕುಡಿಯುವ ನೀರಿನ ಪೂರೈಕೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷಿ ಚಟುವಟಿಕೆಗಳಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗಬಾರದು. ಜಾನುವಾರುಗಳು ರೋಗದಿಂದ ಮರಣ ಹೊಂದಿದರೆ ತುರ್ತು ಪರಿಹಾರ ವಿತರಿಸಬೇಕು. ಮೇವಿನ ದಾಸ್ತಾನು ಇರಿಸಿಕೊಳ್ಳಬೇಕು ಎಂದು ಸಚಿವರು ನಿರ್ದೇಶಿಸಿದರು.

ಸಂವಹನ ಪ್ರಕ್ರಿಯೆಗೆ ತೊಡಕಾಗದಂತೆ ಬಿಎಸ್ಎನ್ಎಲ್ ಟವರ್ ಹಾಕಬೇಕು. ಬಂಡೀಪುರದಲ್ಲಿ ಟವರ್ಗೆ ಸೋಲಾರ್ ಉಪಕರಣಗಳ ಅಗತ್ಯವಿದ್ದು ನೆಲಮಟ್ಟದಲ್ಲಿ ಹಾಕಿದರೆ ಆನೆಗಳು ತುಳಿದು ಹಾನಿಗೊಳಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹಾಗಾಗಿ ಫಿಲ್ಲರ್ಗಳನ್ನು ನಿರ್ಮಿಸಿ ಮೇಲೆ ಪ್ಯಾನಲ್ಗಳನ್ನು ಹಾಕಬೇಕು. ಈ ಸಂಬಂಧ ಪರಿಷ್ಕೃತ ಪ್ರಸ್ತಾವವನ್ನು ಕಳಿಸಬೇಕು ಎಂದು ಬಿಎಸ್ಎನ್ಎಲ್ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಮಾತನಾಡಿ, ‘ಹನೂರು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕೌದಳ್ಳಿ ಭಾಗದಲ್ಲಿ ಕೊಳವೆ ಬಾವಿ ಕೊರೆಸಲು ಸ್ಥಳ ಗುರುತಿಸಲಾಗಿದ್ದು, ಅರಣ್ಯ ಇಲಾಖೆಯ ಅನುಮತಿ ಅಗತ್ಯವಿದ್ದು ಸಚಿವರು ಸೂಕ್ತ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದರು.

ಕುಡಿಯುವ ನೀರಿನ ಕಾಮಗಾರಿಗಳಿಗೆ ಅಡ್ಡಿ ಮಾಡದಂತೆ ಬೋರ್ವೆಲ್ ಕೊರೆಸಲು ಹಾಗೂ ಪೈಪ್ಲೈನ್ ಅಳವಡಿಸಲು ಅನುಮತಿ ನೀಡಬೇಕು ಎಂದು ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಎಫ್ಒ ಚಕ್ರಪಾಣಿ ಅವರಿಗೆ ಸಚಿವರು ನಿರ್ದೇಶನ ನೀಡಿದರು.

ಸಭೆಯಲ್ಲಿ ಗುಂಡ್ಲುಪೇಟೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚೂಡ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನ, ನಗರಸಭೆ ಅಧ್ಯಕ್ಷರಾದ ಸುರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸಭೆಯಲ್ಲಿ ಉಪಸ್ಥಿತರಿದ್ದರು.

‘ನೀರಿನ ಶುದ್ಧತೆ ಪರೀಕ್ಷೆ’

‘ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿ ಶುದ್ದತೆಯ ಬಗ್ಗೆ ಖಾತರಿಪಡಿಸಿಕೊಳ್ಳಲಾಗುತ್ತಿದೆ. ಬೆಳೆ ಹಾನಿ ಮನೆ ಹಾನಿಯಂತಹ ಪ್ರಕರಣಗಳಿಗೆ ನಿಯಮಾನುಸಾರ ತ್ವರಿತವಾಗಿ ಪರಿಹಾರ ಕಲ್ಪಿಸಲಾಗುತ್ತಿದೆ. ಬೆಳೆ ಬದಲಾವಣೆಯಿಂದ ಹಲವು ರೈತರು ಪರಿಹಾರ ವಂಚಿತರಾಗುತ್ತಿದ್ದು ಪರಿಹಾರ ಪೋರ್ಟಲ್ನಲ್ಲಿ ಎಡಿಟ್ ಆಪ್ಶನ್ ನೀಡಿದರೆ ರೈತರಿಗೆ ಅನುಕೂಲವಾಗಲಿದೆ’ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಚಿವರಿಗೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.