ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾರಂಭ: ಪೋಷಕರ ವಿಶ್ವಾಸಗಳಿಸಲು ಸಚಿವ ಸೋಮಶೇಖರ್‌ ಸಲಹೆ

Last Updated 21 ಆಗಸ್ಟ್ 2021, 15:16 IST
ಅಕ್ಷರ ಗಾತ್ರ

ಚಾಮರಾಜನಗರ/ಗುಂಡ್ಲುಪೇಟೆ: ಸೋಮವಾರದಿಂದ (ಆ.23) 9,10ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಲಿರುವುದರಿಂದ ಎಲ್ಲ ಕೋವಿಡ್‌ ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದು ಕೋವಿಡ್‌ ನಿರ್ವಹಣೆಯ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಪರಿಸ್ಥಿತಿ ಹಾಗೂ ಶಾಲಾ ಆರಂಭಕ್ಕೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಹಾಗೂ ಚಾಮರಾಜನಗರದಲ್ಲಿ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ವಿವಿಧ ವಿಷಯಗಳನ್ನು ಚರ್ಚಿಸಿದರು.

‘ಯಾವುದೇ ಲೋಪಕ್ಕೆ ಅವಕಾಶ ನೀಡದಂತೆ ತರಗತಿಗಳನ್ನು ನಡೆಸಬೇಕು. ಕೋವಿಡ್ ಕುರಿತು ಶಿಕ್ಷಣ ಇಲಾಖೆ ಹೊರಡಿಸಿರುವ ಮಾನದಂಡಗಳನ್ನು ಬಿಗಿಯಾಗಿ ಜಾರಿಗೊಳಿಸಬೇಕು. ವಿದ್ಯಾರ್ಥಿಗಳ ಸುರಕ್ಷರತೆ ಬಗ್ಗೆ ಕಾಳಜಿವಹಿಸಬೇಕು.ಶಿಕ್ಷಕರು, ಉಪನ್ಯಾಸಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು.ಪ್ರತಿ ಕೊಠಡಿಗೆ ಶಿಕ್ಷಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿ ಅನ್ವಯ ವಿದ್ಯಾರ್ಥಿಗಳು ಕುಳಿತುಕೊಳ್ಳಲು ವ್ಯವಸ್ಥೆ ಕೈಗೊಳ್ಳಬೇಕು’ ಎಂದರು.

‘ಪೋಷಕರೊಂದಿಗೆ ಮಾತನಾಡಿ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ವಿಶ್ವಾಸ ಮೂಡಿಸಿ. ಶಾಲೆ ಆರಂಭದ ನಂತರ ಭೇಟಿ ನೀಡಿ ಶಾಲೆಯಲ್ಲಿನ ತರಗತಿಗಳ ಸುಗಮ ನಿರ್ವಹಣೆ ವ್ಯವಸ್ಥೆಯನ್ನು ಪರಿಶೀಲಿಸಲಾಗುವುದು. ಕೋವಿಡ್ ಮತ್ತು ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಏನೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ’ ಎಂದರು.

ಲಸಿಕೆಗೆ ಒತ್ತು ನೀಡಿ: ಜಿಲ್ಲೆಗೆ ಪ್ರತಿ ದಿನ ಕೋವಿಡ್‌ ಲಸಿಕೆಯ 25 ಸಾವಿರ ಡೋಸ್‌ ನೀಡಬೇಕು ಎಂದು ಮನವಿ ಮಾಡಲಾಗಿದೆ. ಕೋವಿಡ್ ಲಸಿಕೆ ನೀಡಲು ಹೆಚ್ಚು ಗಮನ ಹರಿಸಬೇಕು. ಕಾಡಂಚಿನ ಗ್ರಾಮಗಳ ಎಲ್ಲರಿಗೂ ಲಸಿಕೆ ನೀಡಬೇಕು’ ಎಂದು ಸಚಿವರು ಸೂಚಿಸಿದರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎನ್.ಮಹೇಶ್, ಸಿ.ಎಸ್.ನಿರಂಜನ ಕುಮಾರ್, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ. ಶಾಂತಮೂರ್ತಿ ಕುಲಗಾಣ, ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ ನಟರಾಜು, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ್ ಭೊಯರ್ ನಾರಾಯಣ ರಾವ್, ಎಎಸ್‌ಪಿ ಕೆ.ಎಸ್.ಸುಂದರ್ ರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ.ರವಿ, ಗುಂಡ್ಲುಪೇಟೆಯಲ್ಲಿ ನಡೆದ ಸಭೆಯಲ್ಲಿಪುರಸಭೆ ಅಧ್ಯಕ್ಷ ಪಿ. ಗಿರೀಶ್, ಉಪಾಧ್ಯಕ್ಷೆ ದೀಪಿಕ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎನ್. ಮಲ್ಲೇಶ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT