ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ದಂಧೆ ವಿಚಾರದಲ್ಲಿ ರಾಜಕೀಯ ಬೇಡ: ಸಚಿವ ಸುರೇಶ್ ಕುಮಾರ್

Last Updated 12 ಸೆಪ್ಟೆಂಬರ್ 2020, 6:34 IST
ಅಕ್ಷರ ಗಾತ್ರ

ಕೊಳ್ಳೇಗಾಲ: ‘ಡ್ರಗ್ಸ್ ದಂಧೆ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡ್ರಗ್ಸ್ ಯುವ ಜನಾಂಗದವರನ್ನು ನಾಶ ಮಾಡುತ್ತಿದೆ. ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಇದರ ವಿರುದ್ಧ ಹೋರಾಡಬೇಕು. ಡ್ರಗ್ಸ್ ದಂಧೆಯ ತನಿಖೆಯ ದಾರಿ ತಪ್ಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವ ತನಿಖೆಗೂ ಯಾರ ಇಲ್ಲ. ನಾವು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ’ ಎಂದರು.

ರಾಜಕೀಯ ಭೇಟಿ ಅಲ್ಲ: ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಯಾರು ಬೇಕಾದರೂ ಮತ್ತು ಯಾವ ಪಕ್ಷದ ಮುಖಂಡರು ಕೂಡ ಮುಖ್ಯಮಂತ್ರಿಯವರನ್ನು ಭೇಟಿ ಮಾಡಬಹುದು. ಅದರಲ್ಲಿ ಏನು ತಪ್ಪಿದೆ? ಇದರಲ್ಲಿ ಯಾವ ರಾಜಕೀಯವೂ ಅಲ್ಲ. ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ತುರ್ತಾಗಿ ಹಣ ಬಿಡುಗಡೆ ಮಾಡಿ ಕ್ಷೇತ್ರದ ಜನರಿಗೆ ಅಭಿವೃದ್ಧಿ ಮಾಡಿ ಎಂದು ಮನವಿ ಮಾಡುವುದಕ್ಕೆ ಬಂದಿದ್ದರು, ಯಾವ ರಾಜಕೀಯವೂ ಇಲ್ಲ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT