ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ವೆಂಕಟೇಶ್

Published 26 ಜನವರಿ 2024, 4:22 IST
Last Updated 26 ಜನವರಿ 2024, 4:22 IST
ಅಕ್ಷರ ಗಾತ್ರ

ಚಾಮರಾಜನಗರ: 75ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಟೇಶ್ ಅವರು ಧ್ವಜಾರೋಹಣ ನೆರವೇರಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಂಡಿದ್ದಾರೆ.

ಧ್ವಜಾರೋಹಣ ನಡೆಸಿದ ಬಳಿಕ ತೆರೆದ ವಾಹನದಲ್ಲಿ ಸಾಗಿದ ಜಿಲ್ಲಾ ಉಸ್ತುವಾರಿ ಸಚಿವರು, ಪಥಸಂಚಲನದಲ್ಲಿ ಭಾಗವಹಿಸಲಿರುವ 18 ತುಕಡಿಗಳ ಪರಿವೀಕ್ಷಣೆ ನಡೆಸಿದರು.

ಆಕರ್ಷಕ ಪಥಸಂಚಲನ: ಪೊಲೀಸ್, ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕ ದಳ, ಅರಣ್ಯ ಇಲಾಖೆ, ಅಬಕಾರಿ ಇಲಾಖೆ. ಎನ್ ಸಿ ಸಿ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ 18 ತುಕಡಿಗಳ ಪಥಸಂಚಲನ ಗಮನಸೆಳೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT