ಖಾಸಗಿ ವೈದ್ಯರ ಮುಷ್ಕರ: ಮಿಶ್ರ ಪ್ರತಿಕ್ರಿಯೆ

ಚಾಮರಾಜನಗರ: ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರಕ್ರಿಯೆಗಳನ್ನು ನಡೆಸಲು ಅನುಮತಿ ನೀಡಿರುವುದನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದ ಮುಷ್ಕರಕ್ಕೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ಜಿಲ್ಲಾ ಕೇಂದ್ರದಲ್ಲಿ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಹೊರರೋಗಿಗಳ ವಿಭಾಗ ಬಂದ್ ಆಗಿತ್ತು. ಉಳಿದ ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಕ್ಲಿನಿಕ್‌ಗಳು ಕೂಡ ತೆರೆದಿದ್ದವು.
ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿ ವಿಭಾಗ ಕಾರ್ಯನಿರ್ವಹಿಸುತ್ತಿದ್ದುದರಿಂದ ಹಾಗೂ ಕ್ಲಿನಿಕ್‌ಗಳಲ್ಲಿ ವೈದ್ಯರೂ ಲಭ್ಯವಿದ್ದುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಸಂದಣಿ ಕಂಡು ಬರಲಿಲ್ಲ.
ಯಳಂದೂರಿನಲ್ಲಿ ಅಲೋಪಥಿ ವೈದ್ಯರು ಕ್ಲಿನಿಕ್‌ಗಳನ್ನು ತೆರೆಯಲಿಲ್ಲ. ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು ಭಾಗಗಳಲ್ಲಿ ಖಾಸಗಿ ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯವಾಗಲಿಲ್ಲ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.