ಚಾಮರಾಜನಗರ: ಈಚೆಗೆ ಆಲಿಕಲ್ಲು ಮಳೆ ಸುರಿದು ಬೆಳೆ ಹಾನಿ ಹಾಗೂ ಮನೆ ಹಾನಿ ಸಂಭವಿಸಿದ ತಾಲ್ಲೂಕಿನ ದೊಡ್ಡಮೋಳೆ, ಕಟ್ನವಾಡಿ, ಕೆ.ಕೆ ಹುಂಡಿ ಗ್ರಾಮಗಳಿಗೆ ಶಾಸಕ ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು.

ಕೆ.ಕೆ ಹುಂಡಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಲಿಕಲ್ಲು ಮಳೆಗೆ ಬಾಳೆ ಬೆಳೆ ನಾಶವಾಗಿರುವುದನ್ನು ವೀಕ್ಷಿಸಿದ ಶಾಸಕರು ಅಧಿಕಾರಿಗಳು ಹಾಗೂ ರೈತರಿಂದ ಹಾನಿಯ ವಿವರ ಪಡೆದರು.

ದೊಡ್ಡಮೋಳೆ, ಕಟ್ನವಾಡಿ ಗ್ರಾಮಗಳಲ್ಲಿ ಮಳೆಗೆ ಮನೆಯ ಗೋಡೆ ಕುಸಿದಿದ್ದು ರಾಜಸ್ವ ನಿರೀಕ್ಷಕರು, ಕಂದಾಯ ಅಧಿಕಾರಿಗಳ ತಂಡ ಭೇಟಿನೀಡಿ, ಹಾನಿ ಅಂದಾಜಿಸಿ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭ ರಾಜಸ್ವ ನಿರೀಕ್ಷಕ ರಾಜಶೇಖರ್, ಗುರುಸಿದ್ದಪ್ಪ, ಗ್ರಾಮ ಆಡಳಿತಾಧಿಕಾರಿ ವೆಂಕಟೇಶ್, ಮುಖಂಡರಾದ ಎಚ್.ಎಂ.ಮಹದೇವಶೆಟ್ಟಿ, ಮಂಜುನಾಥ್, ಕುಮಾರ್, ಉಡಿಗಾಲ ನಂಜಪ್ಪ, ದೊರೆಸ್ವಾಮಿ, ಕೇಶವಮೂರ್ತಿ, ಶಿವಣ್ಣ, ಸುಬ್ರಹ್ಮಣ್ಯ, ಮಹದೇವಸ್ವಾಮಿ, ಕುಮಾರ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.