ಮಂಗಳವಾರ, ಡಿಸೆಂಬರ್ 1, 2020
26 °C

ಮಾದಪ್ಪನ ಲಾಡು ಪ್ರಸಾದ ₹5 ತುಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ಸ್ವಾಮಿಯ ಲಾಡು ಪ್ರಸಾದದ ಮಾರಾಟ ದರವನ್ನು ಹೆಚ್ಚಿಸಲಾಗಿದೆ. 

100 ಗ್ರಾಂ ತೂಕದ ಒಂದು ಲಾಡಿನ ಬೆಲೆ ₹5 ಹೆಚ್ಚಿಸಲಾಗಿದೆ. ಈ ಹಿಂದೆ ಒಂದು ಲಾಡಿನ ಮಾರಾಟ ದರ ₹20 ಇತ್ತು. ಈಗ ₹25 ಆಗಿದೆ. ಭಾನುವಾರದಿಂದಲೇ (ನ.8) ಹೊಸ ದರ ಜಾರಿಗೆ ಬಂದಿದೆ. 

ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರ ಅನುಮೋದನೆಯನ್ನು ಪಡೆದು, ಲಾಡು ತಯಾರಿಸಲು ಖರ್ಚಾಗುವ ಪರಿಮಾಣದಂತೆ ಮಾರಾಟ ದರ ಹೆಚ್ಚಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಆದೇಶದಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು