ಬುಧವಾರ, ಮೇ 18, 2022
24 °C

ಚಾಮರಾಜನಗರ: ಮಹದೇಶ್ವರ ಬೆಟ್ಟ- ವಾರದ ಎಲ್ಲ ದಿನ ದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಸರ್ಕಾರವು ವಾರಾಂತ್ಯದ ಕರ್ಫ್ಯೂ ರದ್ದುಪಡಿಸಿರುವುದರಿಂದ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಶನಿವಾರ ಮತ್ತು ಭಾನುವಾರ ಸೇರಿದಂತೆ ವಾರದ ಎಲ್ಲ ದಿನಗಳಲ್ಲೂ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 

’ತಕ್ಷಣದಿಂದಲೇ ಜಾರಿಗೆ ಬರುವಂತೆ, ಸರ್ಕಾರದ ಮುಂದಿನ ಆದೇಶದವರೆಗೂ ದೇವಾಲಯವು ವಾರದ ಎಲ್ಲ ದಿನ ಬೆಳಿಗ್ಗೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ದರ್ಶನಕ್ಕೆ ತೆರೆದಿರುತ್ತದೆ‘ ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

’ಕೋವಿಡ್‌ ನಿರ್ಬಂಧದ ಭಾಗವಾಗಿ ಯಾವುದೇ ಉತ್ಸವ, ಸೇವೆಗಳು ಇರುವುದಿಲ್ಲ. ದಾಸೋಹದಲ್ಲಿ ವೈಯಕ್ತಿಕ ಅಂತರ ಕಾಪಾಡಿಕೊಂಡು ತಿಂಡಿ ಪ್ರಸಾದ ನೀಡಲಾಗುತ್ತದೆ. ದೇವಾಲಯದ ಗರ್ಭಗುಡಿಯ ಮುಂಭಾಗ ಒಂದು ಬಾರಿಗೆ 50 ಜನರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಲಾಡು ಪ್ರಸಾದ ವ್ಯವಸ್ಥೆ ನಿಯಮಾನುಸಾರ ಇರಲಿದೆ‘ ಎಂದು ಅವರು ಹೇಳಿದ್ದಾರೆ. 

’ಭಕ್ತಾದಿಗಳು ಮಾಸ್ಕ್ ಧರಿಸುವುದು ಕಡ್ಡಾಯ. ಅಂತರ ಕಾಯ್ದುಕೊಂಡು, ಸ್ಯಾನಿಟೈಸರ್‌ ಬಳಸಿ ದೇವಾಲಯದೊಳಗೆ ಪ್ರವೇಶಿಸಬೇಕು. ಕೋವಿಡ್ ರೋಗ ಲಕ್ಷಣಗಳಿದ್ದಲ್ಲಿ ಪ್ರವೇಶಕ್ಕೆ ಅವಕಾಶ ಕೊಡುವುದಿಲ್ಲ‘ ಎಂದು ಅವರು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು