ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛ ಭಾರತ: 31 ದಿನದ ಅಭಿಯಾನಕ್ಕೆ ಚಾಲನೆ

Last Updated 1 ಅಕ್ಟೋಬರ್ 2021, 16:16 IST
ಅಕ್ಷರ ಗಾತ್ರ

ಚಾಮರಾಜನಗರ: ‘ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ವಲಯವನ್ನಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಕಸದ ಬುಟ್ಟಿಗಳಲ್ಲಿ ಸಂಗ್ರಹಿಸಿ ವಿಲೇವಾರಿ ಮಾಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಶುಕ್ರವಾರ ತಿಳಿಸಿದರು.

75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನೆಹರು ಯುವ ಕೇಂದ್ರದ ವತಿಯಿಂದ ಇದೇ 31ರವರೆಗೆ ಆಯೋಜಿಸಲಾಗಿರುವ ಸ್ವಚ್ಛ ಭಾರತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಮಾತನಾಡಿದರು.

‘ಗ್ರಾಮ ಪಂಚಾಯಿತಿ, ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ, ಸ್ವ-ಸಹಾಯ ಸಂಘಗಳು, ಯುವ ಸಂಘಗಳು, ಸ್ವಯಂ ಸೇವಾ ಸಂಸ್ಥೆಗಳು, ಶಿಕ್ಷಕರು, ಅರಣ್ಯ ಸಿಬ್ಬಂದಿ ಸೇರಿದಂತೆ ಎಲ್ಲ ವರ್ಗದವರ ಸಹಕಾರದೊಂದಿಗೆ ಪ್ಲಾಸ್ಟಿಕ್ ಮುಕ್ತ ಭಾರತವನ್ನಾಗಿಸುವುದು ಕೇಂದ್ರ ಸರ್ಕಾರದ ಆಶಯವಾಗಿದೆ. ಅದಕ್ಕಾಗಿ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಹಕಾರ ಅವಶ್ಯಕವಾಗಿದೆ’ ಎಂದರು.

ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ರಾಜೇಶ್ ಕಾರಂತ್ ಮಾತನಾಡಿ, ‘ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ಸ್ವಚ್ಚ ಭಾರತ್ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಲಾಗುತ್ತದೆ. ವಿಶೇಷವಾಗಿ ಪ್ರವಾಸಿ ತಾಣಗಳು, ಶೈಕ್ಷಣಿಕ ಸಂಸ್ಥೆಗಳು, ಬಸ್, ರೈಲ್ವೆ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ, ಐತಿಹಾಸಿಕ ಹಾಗೂ ಪಾರಂಪಾರಿಕ ಕಟ್ಟಡಗಳು, ಧಾರ್ಮಿಕ ಸ್ಥಳಗಳು ಹಾಗೂ ಇದರ ಆವರಣ, ಆಸ್ಪತ್ರೆ, ಜಲ ಮೂಲಗಳ ಪ್ರದೇಶದಲ್ಲಿ ತ್ಯಾಜ್ಯ ಸಂಗ್ರಹಣೆಗೆ ವಿಶೇಷ ಗಮನ ನೀಡಲಾಗುತ್ತದೆ’ ಎಂದು ತಿಳಿಸಿದರು.

‘ಸುರಕ್ಷಿತ ಭಾರತ ಎಂಬುದು ಕಾರ್ಯಕ್ರಮದ ಧ್ಯೇಯವಾಗಿದ್ದು, ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಪೂರ್ಣವಾಗಿ ತ್ಯಜಿಸುವಂತೆ ಜನರ ಮನೆ ಬಾಗಿಲಿಗೆ ತೆರಳಿ ಜಾಗೃತಿ ಮೂಡಿಸುವ ಉದ್ದೇಶ ಸಾಕಾರಗೊಳಿಸಬೇಕು. ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಸ್ನೇಹಿ ಮರು ಬಳಕೆಯ ವಸ್ತುಗಳನ್ನು ಬಳಸುವಂತೆ ಪ್ರೇರೇಪಿಸಬೇಕು’ ಎಂದು ಅವರು ಹೇಳಿದರು.

ನಗರದ ವಿದ್ಯಾವಿಕಾಸ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸುವ ಮೂಲಕ ಸ್ವಚ್ಛ ಭಾರತ್ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ದೊರೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT