ಸೋಮವಾರ, ಸೆಪ್ಟೆಂಬರ್ 27, 2021
28 °C

ಚಾಮರಾಜನಗರ: ಕುಸಿದು ಬಿದ್ದು ನಗರಸಭಾ ಸದಸ್ಯ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಪ್ರಕರಣವೊಂದರ ವಿಚಾರಣೆಗಾಗಿ ಬುಧವಾರ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದ‌ ನಗರಸಭಾ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಗಾಳಿಪುರ ಬಡಾವಣೆಯ ಅಹಮದ್ ಮೊಹಲ್ಲಾ ನಿವಾಸಿ, ನಗರಸಭೆಯ 6ನೇ ವಾರ್ಡ್ ಸದಸ್ಯ ಸಮೀವುಲ್ಲಾ ಖಾನ್ (45) ಮೃತಪಟ್ಟವರು.

ಎಸ್ ಡಿಪಿಐ ಜಿಲ್ಲಾ ಘಟಕದ ಉಪಾಧ್ಯಕ್ಷರೂ ಆಗಿರುವ ಅವರಿಗೆ ಪತ್ನಿ, ಮಗ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

ಮೂರು ವರ್ಷಗಳ ಹಿಂದೆ, ಬಾಬರಿ‌ ಮಸೀದಿ ಧ್ವಂಸ ಪ್ರಕರಣದ ವರ್ಷಾಚರಣೆ ದಿನ (ಡಿ.6) ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿರುವ ಸಂಬಂಧ ಸಮೀವುಲ್ಲಾ ಸೇರಿದಂತೆ 106 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆಗಾಗಿ ಸಮೀವುಲ್ಲಾ ಖಾನ್ ಹಾಗೂ ಇತರರು ನ್ಯಾಯಾಲಯಕ್ಕೆ ಬಂದಿದ್ದರು. 

'ಆವರಣದಲ್ಲಿ ವಕೀಲರೊಂದಿಗೆ ಮಾತನಾಡುತ್ತಿದ್ದಂತೆಯೇ ಸಮೀವುಲ್ಲಾ ಕುಸಿದು ಬಿದ್ದರು. ತಕ್ಷಣವೇ ಅವರನ್ನು ನಗರದ ಬಸವರಾಜೇಂದ್ರ ಆಸ್ಪತ್ರೆಗೆ ದಾಖಲಾಯಿಸಲಾಯಿತು. ಅಷ್ಟು ಹೊತ್ತಿಗಾಗಲೇ ಅವರು ಕೊನೆಯುಸಿರೆಳೆದಿದ್ದರು' ಎಂದು ಎಸ್‌ಡಿಪಿಐ ಮುಖಂಡರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು