ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತವನ್ನು ಭಿಕ್ಷುಕರ, ಸಾಲಗಾರರ ದೇಶವನ್ನಾಗಿ ಮಾಡಿದ್ದೇ ಕಾಂಗ್ರೆಸ್ ಸಾಧನೆ: ಕಟೀಲ್

Last Updated 28 ಅಕ್ಟೋಬರ್ 2022, 8:17 IST
ಅಕ್ಷರ ಗಾತ್ರ

ಹನೂರು (ಚಾಮರಾಜನಗರ): ದೇಶವನ್ನು ಭಿಕ್ಷುಕರ, ಸಾಲಗಾರರ ರಾಷ್ಟ್ರವನ್ನಾಗಿ ಮಾಡಿದ್ದೇ ಕಾಂಗ್ರೆಸ್ ಸಾಧನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ವ್ಯಂಗ್ಯವಾಡಿದರು.

ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶವು ಜಗತ್ತಿನಲ್ಲಿ ಐದನೇ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಿದೆ. ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಮೊದಲ ಸ್ಥಾನ ಅಲಂಕರಿಸಿದೆ. ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಲಗಾರರ ರಾಜ್ಯವನ್ನಾಗಿ ಮಾಡಿದ್ದರು' ಎಂದರು.

ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ‌ ಸಚಿವ ವಿ.ಸೋಮಣ್ಣ ಅವರು ಬಾರದಿರುವ ಬಗ್ಗೆ‌ ಪ್ರತಿಕ್ರಿಯಿಸಿದ ಅವರು, 'ಅನಾರೋಗ್ಯದ ಕಾರಣದಿಂದ ಅವರು ಬಂದಿಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT