ಶನಿವಾರ, ಡಿಸೆಂಬರ್ 5, 2020
25 °C

ಚಾಮರಾಜನಗರ: ಸರ್ಕಾರಿ ನೌಕರರ ಕ್ಯಾಂಟೀನ್ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಆರಂಭಿಸಿರುವ ಸರ್ಕಾರಿ ನೌಕರರ ಕ್ಯಾಂಟಿನ್‌ಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಶುಕ್ರವಾರ ಚಾಲನೆ ನೀಡಿದರು.

ನಗರದ ನ್ಯಾಯಾಲಯದ ರಸ್ತೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಕ್ಯಾಂಟೀನ್‌ ಆರಂಭಿಸಲಾಗಿದೆ. 

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ‘ಜಿಲ್ಲೆಯಲ್ಲಿ ಸರ್ಕಾರಿ ನೌಕರರಿಗೆ ಕ್ಯಾಂಟಿನ್ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಕ್ಯಾಂಟಿನ್‌ನನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಗೊಳಿಸಿ ನಿರ್ವಹಿಸಿಕೊಂಡು ಹೋಗಬೇಕು’ ಎಂದು ಸಲಹೆ ಮಾಡಿದರು.

ಸರ್ಕಾರಿ ನೌಕರರ ಸಂಘದ ಕಟ್ಟಡದ ಆವರಣದಲ್ಲಿ ಶಾಸಕರ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲು ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು. 

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ಮಾತನಾಡಿ, ‘ಸರ್ಕಾರಿ ನೌಕರರ ಕ್ಯಾಂಟಿನ್ ‌ಅನ್ನು ಎಲ್ಲ ಜಿಲ್ಲೆಯಲ್ಲಿಯೂ ಮಾದರಿ ಕ್ಯಾಂಟಿನ್ ಆಗಿ ಮಾಡಲು ಈ ಕಾರ್ಯಕ್ರಮವು ಪ್ರೇರಣೆಯಾಗಿದೆ. ಇಲ್ಲಿ ದಿನಸಿ ಮತ್ತು ಗೃಹಬಳಕೆಯ ವಸ್ತುಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದ್ದು, ನೌಕರರು ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ ಗೌಡಪ್ಪ ಪಾಟೀಲ್ ಅವರು ಮಾತನಾಡಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಅವರು ಮಾತನಾಡಿ,  ‘ಸಂಘವು ರಕ್ತದಾನ ಶಿಬಿರ, ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯ, ಕ್ರೀಡಾಕೂಟ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನೌಕರರ ಹಿತ ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ಸಾರಾ ಥಾಮಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ.ಜವರೇಗೌಡ, ನಗರಸಭೆ ಆಯುಕ್ತ ರಾಜಣ್ಣ, ಖಜಾಂಚಿ ಆರ್. ಶ್ರೀನಿವಾಸ್, ಗೌರವ ಅಧ್ಯಕ್ಷ ವಿ.ವಿ. ಶಿವರುದ್ರಯ್ಯ, ಬೆಂಗಳೂರು ಸಾಯಿ ಇಂಟರ್ ನ್ಯಾಷನಲ್ ಸಂಸ್ಥಾಪಕ ಎಸ್. ಪ್ರಸಾದ್ ಇದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.