ಚಾಮರಾಜನಗರ: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 209ರ ಅಭಿವೃದ್ಧಿ ಕಾಮಗಾರಿಗೆ ಅಗತ್ಯವಿರುವ ಭೂಮಿಯ ಸ್ವಾಧೀನ ಪ್ರಕ್ರಿಯೆಯನ್ನು ಫೆಬ್ರುವರಿ ಒಳಗಾಗಿ ಪೂರ್ಣಗೊಳಿಸುವಂತೆ ಸಂಸದ ಆರ್.ಧ್ರುವನಾರಾಯಣ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಜಿಲ್ಲಾಧಿಕಾರಿ ಹಾಗೂ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ 209ರ ಅಭಿವೃದ್ಧಿ ಯೋಜನೆಯ ವಿಶೇಷಾಧಿಕಾರಿ ಶ್ರೀಧರ್ ಅವರಿಂದ ಯೋಜನೆಯ ಪ್ರಗತಿ ಬಗ್ಗೆ ಸಂಸದರು ಮಾಹಿತಿ ಪಡೆದರು.

‘ಜಿಲ್ಲೆಯಲ್ಲಿ ಒಟ್ಟು 68 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿದ್ದು, ಒಟ್ಟು 133 ಹೆಕ್ಟೇರ್ಗಳಷ್ಟು ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಈ ಪೈಕಿ 87 ಹೆಕ್ಟೇರ್ಗಳಷ್ಟು ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. 45.5 ಹೆಕ್ಟೇರ್ಗಳಷ್ಟು ಇನ್ನೂ ಬಾಕಿ ಇದೆ. ಸ್ವಾಧೀನಪಡಿಸಿಕೊಳ್ಳದೆ ಕಾಮಗಾರಿ ನಡೆಸಲು ಕಷ್ಟವಾಗುತ್ತಿದೆ’ ಎಂದು ಶ್ರೀಧರ್ ಹೇಳಿದರು.

‘ಸ್ವಾಧೀನಪಡಿಸಿಕೊಂಡಿರುವ ಭೂಮಿಯ ಮಾಲೀಕರಿಗೆ ಇನ್ನೂ ₹ 33.7 ಕೋಟಿ (ಚಾಮರಾಜನಗರ–₹ 16.5 ಕೋಟಿ, ಯಳಂದೂರು–₹ 8.5 ಕೋಟಿ ಮತ್ತು ಕೊಳ್ಳೇಗಾಲ–₹ 8.7 ಕೋಟಿ) ಪರಿಹಾರ ನೀಡಬೇಕಿದೆ. 68 ಕಿ.ಮೀ. ಪೈಕಿ 21 ಕಿ.ಮೀ. ಕೆಲಸ ಪೂರ್ಣಗೊಂಡಿದೆ. 12 ಕಿ.ಮೀ. ಕೆಲಸನೇ ಆಗಿಲ್ಲ. ಉಳಿದ ಕಡೆ ಪ್ರಗತಿಯಲ್ಲಿದೆ. ಒಟ್ಟಾರೆ ಯೋಜನೆಯು ಶೇ 42ರಷ್ಟು ಪೂರ್ಣಗೊಂಡಿದೆ’ ಎಂದು ಅವರು ಮಾಹಿತಿ ನೀಡಿದರು.

ಮಧ್ಯ ಪ್ರವೇಶಿಸಿದ ಸಂಸದರು, ‘ಯೋಜನೆಯ ಗಡುವು ಯಾವಾಗ ಕೊನೆಗೊಳ್ಳುತ್ತದೆ? ಪೂರ್ಣಗೊಳಿಸಲು ಎಷ್ಟು ಸಮಯ ಬೇಕಾಗಬಹುದು?’ ಎಂದು ಕೇಳಿದರು.

‘ಯೋಜನೆ ಪೂರ್ಣಗೊಳ್ಳಲು ಆಗಸ್ಟ್ವರೆಗೂ ಸಮಯ ಇದೆ. ಆದರೆ, ಇನ್ನೂ ಸಾಕಷ್ಟು ಕೆಲಸ ಬಾಕಿ ಇರುವುದರಿಂದ ಆ ಹೊತ್ತಿಗೆ ಮುಕ್ತಾಯವಾಗುವುದು ಅನುಮಾನ’ ಎಂದು ಶ್ರೀಧರ್ ಮಾಹಿತಿ ನೀಡಿದರು.

ಆದ್ಯತೆ ಮೇರೆಗೆ ಕ್ರಮ ವಹಿಸಿ: ಯೋಜನೆಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಪಡೆದ ನಂತರ ಮಾತನಾಡಿದ ಆರ್.ಧ್ರುವನಾರಾಯಣ ಅವರು, ‘ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯ ಆಗದಿದ್ದರೆ, ಯೋಜನೆ ಪ್ರಗತಿಯಾಗಲು ಸಾಧ್ಯವಿಲ್ಲ. ಹಾಗಾಗಿ, ಈ ವಿಚಾರವನ್ನು ಆದ್ಯತೆ ನೀಡಿ ತಹಶೀಲ್ದಾರ್ ಹಾಗೂ ಸಂಬಂಧಿಸಿದ ಎಲ್ಲ ಅಧಿಕಾರಿಗಳ ಜೊತೆ ಚರ್ಚಿಸಿ ಈ ತಿಂಗಳ ಒಳಗಾಗಿ 45.5 ಹೆಕ್ಟೇರ್ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ಸೂಚಿಸಿದರು.

‘ಲೋಕಸಭಾ ಚುನಾವಣೆ ಘೋಷಣೆಯಾದರೆ 2-3 ತಿಂಗಳ ಕಾಲ ಏನೂ ಮಾಡಲು ಆಗುವುದಿಲ್ಲ. ಅಧಿಕಾರಿಗಳೆಲ್ಲ ಚುನಾವಣಾ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ಮುನ್ನವೇ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಬೇಕು’ ಎಂದು ಸೂಚಿಸಿದರು.

ನರೇಗಾಕ್ಕೆ ಒತ್ತು ನೀಡಲು ಸಲಹೆ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಅನುಷ್ಠಾನದ ಬಗ್ಗೆಯೂ ಸಂಸದರು ಮಾಹಿತಿ ಪಡೆದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮಾಹಿತಿ ನೀಡಿ, ‘ಜಿಲ್ಲೆಯಲ್ಲಿ ಈ ವರ್ಷ 23.53 ಲಕ್ಷ ಮಾನವ ದಿನಗಳನ್ನು ಸೃಷ್ಟಿಸುವ ಗುರಿ ನೀಡಲಾಗಿದ್ದು, ಇದುವರೆಗೆ 17.09 ಲಕ್ಷ ಮಾನವ ದಿನಗಳ ಕೆಲಸ ಆಗಿದೆ. ಶೇ 72.65ರಷ್ಟು ಪ್ರಗತಿಯಾಗಿದೆ’ ಎಂದು ಹೇಳಿದರು.

‘ಸ್ವಲ್ಪ ಹಣದ ಸಮಸ್ಯೆ ಎದುರಾಗಿತ್ತು. ಕೇಂದ್ರ ಸರ್ಕಾರದಿಂದ ದುಡ್ಡು ಬಿಡುಗಡೆಯಾಗಿದೆ. ರಾಜ್ಯ ಸರ್ಕಾರವೂ ನೀಡುತ್ತಿದೆ. ಹಾಗಾಗಿ ಸಮಸ್ಯೆ ಈಗ ಬಗೆಹರಿದಿದೆ. ಇನ್ನು ಒಂದು ವಾರದಲ್ಲಿ ಸಂಬಳ ಪಾವತಿ ಸರಿದಾರಿಗೆ ಬರಲಿದೆ’ ಎಂದು ಹೇಳಿದರು.

ನರೇಗಾದಡಿ ಕೆಲಸ ಮಾಡಿ: ತಾಲ್ಲೂಕುವಾರು ನರೇಗಾ ಅಂಕಿ ಅಂಶಗಳನ್ನು ಪರಿಗಣಿಸಿದ ಧ್ರುವನಾರಾಯಣ ಅವರು, ಯಳಂದೂರು ತಾಲ್ಲೂಕಿನಲ್ಲಿ ಕಡಿಮೆ ಪ್ರಗತಿ ಆಗಿರುವ ಬಗ್ಗೆ ಪ್ರಶ್ನಿಸಿದರು. ಅರಣ್ಯ ಇಲಾಖೆಯವರು ಕೂಡ ನರೇಗಾದಡಿಯಲ್ಲಿ ಕೆಲಸ ಮಾಡಿಸಬೇಕು ಎಂದು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ಶಂಕರ್ ಅವರಿಗೆ ಸಲಹೆ ನೀಡಿದರು. ಸಾಮಾಜಿಕ ಅರಣ್ಯ ಹಾಗೂ ರೇಷ್ಮೆ ಇಲಾಖೆಯಲ್ಲಿ ಯೋಜನೆ ಸರಿಯಾಗಿ ಅನುಷ್ಠಾನ ಆಗದಿರುವುದುಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಕುಡಿಯುವ ನೀರು: ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಯನ್ನು ಪ್ರಸ್ತಾಪಿಸಿದ ಸಂಸದರು, ಕೈಗೊಂಡಿರುವ ಕ್ರಮಗಳು ಏನು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಕುಡಿಯುವ ನೀರು ಇಲಾಖೆ ಕಾರ್ಯಪಾಲಕ ಎಂಜಿನಿಯರ್ ರವಿಕುಮಾರ್ ಅವರನ್ನು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಂಜಿನಿಯರ್, ‘ಮಾಧ್ಯಮಗಳಲ್ಲಿ ಬಂದಿರುವ ಪರಿಸ್ಥಿತಿ ಅಲ್ಲಿಲ್ಲ. ಇನ್ನು ಮೂರು ದಿನಗಳಲ್ಲಿ ಅಲ್ಲಿ ನೀರುವ ಪೂರೈಸಲು ವ್ಯವಸ್ಥೆ ಮಾಡಲಾಗುವುದು. ಬಾವಿಗಳಲ್ಲಿ ನೀರಿದೆ. ಅದನ್ನು ಇನ್ನಷ್ಟು ಆಳ ಮಾಡಬೇಕಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಿಸುತ್ತೇವೆ’ ಎಂದು ಹೇಳಿದರು.

ಒತ್ತುವರಿ ತೆರವಿಗೆ ಸೂಚನೆ: ಯಳಂದೂರು ಪಟ್ಟಣದಲ್ಲಿ ರಾಜಕಾಲುವೆ ಒತ್ತುವರಿಯಿಂದಾಗಿ ಕೊಳಚೆ ನೀರು ಹೋಗಲು ಸ್ಥಳಾವಕಾಶ ಇಲ್ಲದಿರುವ ಬಗ್ಗೆ ಸಂಸದರು ಹಾಗೂ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಜೆ.ಯೋಗೇಶ್ ಅವರು ಸಭೆಯ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಾಗರತ್ನ ಅವರು, ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಕೂಡ, ನಿರ್ದಾಕ್ಷಿಣ್ಯವಾಗಿ ಒತ್ತುವರಿ ತೆರವುಗೊಳಿಸುವಂತೆ ನಾಗರತ್ನ ಅವರಿಗೆ ಸೂಚಿಸಿದರು.

ಕಾರ್ಯನಿರ್ವಹಿಸದ ಶುದ್ಧನೀರಿನ ಘಟಕಗಳು: ಆಕ್ಷೇಪ

ಹನೂರು ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆರಂಭಿಸಿರುವ ಶುದ್ ಧನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವ ಕುರಿತು ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು.

ಈ ವಿಚಾರವನ್ನು ಪ್ರಸ್ತಾಪಿಸಿದ ಹನೂರು ಶಾಸಕ, ‘ಹಲವು ಕಡೆಗಳಲ್ಲಿ ಶುದ್ಧನೀರಿನ ಘಟಕ ಉದ್ಘಾಟನೆಯಾದ 15 ದಿನಗಳಲ್ಲಿ ಕೆಟ್ಟುನಿಂತಿವೆ. ಅದನ್ನು ದುರಸ್ತಿ ಪಡಿಸುವವರೇ ಇರುವುದಿಲ್ಲ. ಸ್ಥಳೀಯ ಆಡಳಿತ ಆಗಿರಬಹುದು, ಕೆಐಆರ್ಡಿಎಲ್ ಇರಬಹುದು ಯಾರೂ ಈ ಬಗ್ಗೆ ಗಮನ ನೀಡುವುದಿಲ್ಲ. ಘಟಕ ಸ್ಥಾಪನೆ ಮಾಡಿದ ಕಂಪನಿ ಒಂದು ವರ್ಷ ಕಾಲ ಅದನ್ನು ನಿರ್ವಹಿಸಬೇಕು ಎಂಬ ನಿಯಮ ಇದ್ದರೂ ಪಾಲನೆಯಾಗುತ್ತಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಕುಮಾರ್ ಮಾತನಾಡಿ, ‘ಜಿಲ್ಲೆಯ ವಿವಿಧ ಇಲಾಖೆಗಳ ಅಡಿಯಲ್ಲಿ 210 ನೀರಿನ ಘಟಕಗಳಿದ್ದು, 117 ಕಾರ್ಯನಿರ್ವಹಿಸುತ್ತಿವೆ. 20 ಉದ್ಘಾಟನೆಗೆ ಬಾಕಿ ಇವೆ. ಕೆಲವು ಕಡೆಗಳಲ್ಲಿ ಎಲ್ಲಿ ಘಟಕ ಸ್ಥಾಪಿಸಬೇಕು ಎಂಬ ವಿಚಾರದಲ್ಲಿ ವಿವಾದ ಉಂಟಾಗಿದೆ’ ಎಂದು ಮಾಹಿತಿ ನೀಡಿದರು.

ಮಾಸಾಶನ ನೀಡಲು ತಾಕೀತು

ಜಿಲ್ಲೆಯಲ್ಲಿ ವಿವಿಧ ಬ್ಯಾಂಕುಗಳು ವೃದ್ಧಾಪ್ಯ ವೇತನ, ವಿಧವಾ ವೇತನಗಳನ್ನು ಫಲಾನುಭವಿಗಳಿಗೆ ವಿತರಿಸದಿರುವ ವಿಷಯವೂ ಸಭೆಯಲ್ಲಿ ಪ್ರಸ್ತಾಪವಾಯಿತು.

‘ಮಾಸಾಶನ ಸಿಗದೆ ಬಡ ಫಲಾನುಭವಿಗಳಿಗೆ ತೊಂದರೆಯಾಗುತ್ತಿದೆ. ಹಲವರು ಬ್ಯಾಂಕುಗಳ ಮುಂದೆ ಪ್ರತಿಭಟನೆ ಕೂಡ ಮಾಡಿದ್ದಾರೆ. ಫಲಾನುಭವಿಗಳು ಪ್ರತಿಭಟನೆ ಮಾಡುವ ಮಟ್ಟಕ್ಕೆ ವಿಷಯ ಹೋಗಬಾರದು. ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು’ ಎಂದು ಧ್ರುವನಾರಾಯಣ ಅವರು ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಸುನಂದಾ ಅವರಿಗೆ ಸಲಹೆ ನೀಡಿದರು.

ಜೆ.ಯೋಗೇಶ್ ಮಾತನಾಡಿ, ‘ಕೆಲವು ಬ್ಯಾಂಕುಗಳಲ್ಲಿ ಮಾಸಾಶನ ನೀಡಲಾಗುತ್ತಿದ್ದರೂ ರಸೀದಿ ಕೊಡುತ್ತಿಲ್ಲ. ಇದರಿಂದ ಫಲಾನುಭವಿಗಳಿಗೆ ಯಾವ ತಿಂಗಳ ಹಣ ಎಂಬುದು ಗೊತ್ತಾಗುತ್ತಿಲ್ಲ’ ಎಂದು ದೂರಿದರು.

ಸುನಂದಾ ಅವರು ಮಾತನಾಡಿ, ‘ಇದ್ದ ತೊಂದರೆಗಳನ್ನು ಸರಿಪಡಿಸಿ ಬ್ಯಾಂಕುಗಳು ಮಾಸಾಶನ ನೀಡುತ್ತಿವೆ. ಈಗ ರಸೀದಿಯನ್ನೂ ನೀಡಲಾಗುತ್ತಿದೆ’ ಎಂದು ಹೇಳಿದರು.

‘ಎಸ್ಎಸ್ಎಲ್ಸಿ: ಶೇ 80ರಷ್ಟು ಫಲಿತಾಂಶದ ಗುರಿ’

ಸಭೆಗೆ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಮಂಜುಳಾ ಅವರು, ‘ಈ ವರ್ಷದ ಜಿಲ್ಲೆಯು ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂಬ ನಿಟ್ಟಿನಲ್ಲಿ ‘ಲ್ಯಾಂಪ್’ (LAMP-ಲರ್ನಿಂಗ್ ಅಚೀವ್ಮೆಂಟ್ಸ್ ಅಂಡ್ ಮೋಟಿವೇಷನಲ್ ಪ್ರೋಗ್ರಾಮ್) ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಅಡಿಯಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಮಕ್ಕಳನ್ನು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಲು ಕ್ರಮ ವಹಿಸಲಾಗಿದೆ’ ಎಂದರು.

‘ಈ ವರ್ಷ ಕನಿಷ್ಠ ಶೇ 80ರಷ್ಟು ಬರಬೇಕು ಎಂಬ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಮೂರು ಪೂರ್ವಭಾವಿ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದೇವೆ. ತಾಲ್ಲೂಕು ಮಟ್ಟದಲ್ಲಿ ಈಗಾಗಲೇ ಒಂದು ಪರೀಕ್ಷೆ ನಡೆದಿದೆ. ಶೇ 70ರಷ್ಟು ಫಲಿತಾಂಶ ಬಂದಿದೆ. ಫಲಿತಾಂಶವನ್ನು ವಿಶ್ಲೇಷಣೆ ಮಾಡುತ್ತಿದ್ದೇವೆ. ಗುಂಡ್ಲುಪೇಟೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ, ಸಿಇಒ, ಆರೋಗ್ಯಾಧಿಕಾರಿಗೆ ಸನ್ಮಾನ

ಸುಳ್ವಾಡಿ ದುರಂತ ಪ್ರಕರಣವನ್ನು ಯಶಸ್ವಿಯಾಗಿ ನಿಭಾಯಿಸಿದ್ದಕ್ಕಾಗಿ ಸಂಸದ ಆರ್.ಧ್ರುವನಾರಾಯಣ ಅವರು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ. ಹರೀಶ್ ಕುಮಾರ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್.ಪ್ರಸಾದ್ ಅವರನ್ನು ಸನ್ಮಾನಿಸಿದರು.

‘ದುರಂತದಲ್ಲಿ 17 ಜನರ ಪ್ರಾಣ ಹೋಗಿದ್ದರೂ, ಸಾಕಷ್ಟು ಪ್ರಾಣವನ್ನು ರಕ್ಷಿಸಲು ಜಿಲ್ಲಾಡಳಿತ ಕ್ಷಿಪ್ರವಾಗಿ ಕ್ರಮ ಕೈಗೊಂಡಿದೆ. ಅಧಿಕಾರಿಗಳ ಪ್ರತಿನಿಧಿಯಾದ ಜಿಲ್ಲಾಧಿಕಾರಿ, ಸಿಇಒ ಹಾಗೂ ಆರೋಗ್ಯ ಅಧಿಕಾರಿಗಳನ್ನು ವೈಯಕ್ತಿಕವಾಗಿ ಅಭಿನಂದಿಸುತ್ತೇನೆ’ ಎಂದು ಹೇಳಿ ಮೂವರಿಗೂ ಶಾಲು ಹೊದೆಸಿ, ಹೂಗುಚ್ಛ ನೀಡಿ ಸನ್ಮಾನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.