ಶನಿವಾರ, ಸೆಪ್ಟೆಂಬರ್ 18, 2021
23 °C

ರಾತ್ರಿ, ವಾರಾಂತ್ಯ ಕರ್ಫ್ಯೂ 30ರವರೆಗೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕೋವಿಡ್ ಹರಡುವಿಕೆ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ರಾತ್ರಿ ಹಾಗೂ ವಾರಾಂತ್ಯ ಕರ್ಫ್ಯೂವನ್ನು ಇದೇ ತಿಂಗಳ 30ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ. 

ಈ ಮಧ್ಯೆ, ಕಳೆದ ವಾರಕ್ಕೆ ಹೋಲಿಸಿದರೆ ಈ ಶನಿವಾರ ವಾರಾಂತ್ಯದ ಕರ್ಫ್ಯೂ ನಡುವೆಯೇ ಜನ ಹಾಗೂ ವಾಹನಗಳ ಸಂಚಾರ ಸ್ವಲ್ಪ ಹೆಚ್ಚಾಗಿತ್ತು. ಹಣ್ಣು, ತರಕಾರಿ, ಮಾಂಸ, ಹಾಲು, ದಿನಸಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಮಾರಾಟ‌ ಮಾಡುವ ಮಳಿಗೆಗಳು ಮಧ್ಯಾಹ್ನ 2 ಗಂಟೆಯವರೆಗೆ ತೆರೆದಿದ್ದವು.

ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಮದ್ಯದ ಅಂಗಡಿಗಳು ಮಧ್ಯಾಹ್ನ 2 ಗಂಟೆಯವರೆಗೆ ವಹಿವಾಟು‌ ನಡೆಸಿದವು. ಪಾರ್ಸೆಲ್ ಮಾತ್ರ ಲಭ್ಯ ಇತ್ತು. ಹೋಟೆಲ್ ಗಳು ಇಡೀ ದಿನ ತೆರೆದಿದ್ದರೂ ಪಾರ್ಸೆಲ್ ಮಾತ್ರ ಲಭ್ಯವಿತ್ತು.

ಬಸ್ ಸೌಲಭ್ಯ: ಕರ್ಫ್ಯೂ‌‌ ನಡುವೆ ಕೆಎಸ್‌ಆರ್‌ಟಿಸಿ ಬಸ್‌ಗಳ‌ ಸಂಚಾರ ಎಂದಿನಂತೆ ಇತ್ತು. ಮಧ್ಯಾಹ್ನದವರೆಗೆ ಪ್ರಯಾಣಿಕರಿದ್ದರು. ಆ ಬಳಿಕ ಹೆಚ್ಚು ಮಂದಿ‌ ಪ್ರಯಾಣಿಸಲಿಲ್ಲ.

ಖಾಸಗಿ ಬಸ್‌ಗಳು ರಸ್ತೆಗೆ ಇಳಿಯಲಿಲ್ಲ. ಆಟೊಗಳು ಟ್ಯಾಕ್ಸಿಗಳು ಮಧ್ಯಾಹ್ನದವರೆಗೂ ಎಂದಿನಂತೆ ಲಭ್ಯ ಇದ್ದವು. ಜನರ ಹಾಗೂ ಖಾಸಗಿ ಓಡಾಟ ಕಳೆದ ವಾರಕ್ಕಿಂತ ಹೆಚ್ಚಾಗಿತ್ತು. ಅಂಗಡಿಗಳೆಲ್ಲ ಮುಚ್ಚಿದ ಮೇಲೆ ಜನ ಸಂಚಾರ ವಿರಳವಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು