ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಜಗುಣರಾಜು ಕಾಡಾ ಅಧ್ಯಕ್ಷ: ಬಿಜೆಪಿ ಮುಖಂಡನಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಪಟ್ಟ

ಬಿಜೆಪಿ ಮುಖಂಡನಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಪಟ್ಟ
Last Updated 26 ಜುಲೈ 2022, 2:50 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ಬಿಜೆಪಿ ಮುಖಂಡ, ಹಾಸನ ಜಿಲ್ಲಾ ಪ್ರಭಾರಿ ಜಿ.ನಿಜಗುಣರಾಜು ಅವರನ್ನು ಕಾವೇರಿ ಜಲಾನಯನ ಯೋಜನೆಯ ಅ‌ಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಈ ಹಿಂದೆ ನಿಗಮ ಮಂಡಳಿಗಳಿಗೆ ನೇಮಕ ಮಾಡುವಾಗ ಜಿಲ್ಲೆಯ ಎಂ.ರಾಮಚಂದ್ರ ಅವರಿಗೆ ಅವಕಾಶ ನೀಡಲಾಗಿತ್ತು. ಇತ್ತೀಚೆಗಷ್ಟೆ ಅವರ ನೇಮಕಾತಿಯನ್ನು ಸರ್ಕಾರ ರದ್ದುಗೊಳಿಸಿತ್ತು.

24 ನಿಗಮ ಮಂಡಳಿಗಳಿಗೆ ಹೊಸದಾಗಿ ಅಧ್ಯಕ್ಷರನ್ನು ನೇಮಕ ಮಾಡುವಾಗ ಸರ್ಕಾರ ಮತ್ತೆ ಜಿಲ್ಲೆಗೆ ಪ್ರಾತಿನಿಧ್ಯ ನೀಡಿದೆ.

ಹೋಟೆಲ್‌ ಉದ್ಯಮಿಯೂ ಆಗಿರುವ ನಿಜಗುಣರಾಜು ಅವರು ಪಕ್ಷದ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡವರು. ನಮೋ ಚೇತನ ಟ್ರಸ್ಟ್‌ ಹೆಸರಿನಲ್ಲಿ ಹಲವು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಪಕ್ಷದ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಿಜಗುಣರಾಜು ಕೂಡ ಒಬ್ಬರು.

ಕಾಡಾ ಅಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ‘ಪ್ರಜಾವಾಣಿ’ಯೊಂದಿಗೆ ಸಂತಸ ಹಂಚಿಕೊಂಡ ನಿಜಗುಣರಾಜು ಅವರು, ‘ನಾನು ಪಕ್ಷದ ಸಂಘಟನೆಯನ್ನು ಸಕ್ರಿಯವಾಗಿ ಮಾಡುತ್ತಾ ಬಂದವನು. ನನ್ನ ಕೆಲಸ ಹಾಗೂ ಶ್ರಮವನ್ನು ಗುರುತಿಸಿ ಸರ್ಕಾರ ಹಾಗೂ ಪಕ್ಷ, ಚಾಮರಾಜನಗರ, ಮೈಸೂರು ಹಾಗೂ ದಕ್ಷಿಣ ಪ್ರಾಂತ್ಯದ ಜಿಲ್ಲೆಗಳಲ್ಲಿ ಕೆಲಸ ಮಾಡಲು ಅವಕಾಶ ಕೊಟ್ಟಿದೆ. ರೈತನ ಮಗನಾಗಿ ರೈತರ ಹಿತವನ್ನು ಕಾಯುತ್ತೇನೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೇರಿದಂತೆ ಪಕ್ಷದ ಎಲ್ಲ ನಾಯಕರು, ಸಚಿವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT