ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಒಂಬತ್ತು ಜನರಿಗೆ ಕೋವಿಡ್ ಇರುವುದು ಖಚಿತವಾಗಿದೆ. ಒಬ್ಬರು ಮಾತ್ರ ಗುಣಮುಖರಾಗಿದ್ದಾರೆ. 85 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಗುಣಮುಖರಾದವರ ಸಂಖ್ಯೆ ಕಡಿಮೆ ಇರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 75ಕ್ಕೆ ಏರಿದೆ. ಸೋಂಕಿತರ ಪೈಕಿ ನಾಲ್ವರು ಐಸಿಯುನಲ್ಲಿ ಹಾಗೂ 18 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 32,331 ಕೋವಿಡ್ ಪ್ರಕರಣ ದೃಢಪಟ್ಟಿವೆ. 31,720 ಮಂದಿ ಸೋಂಕು ಮುಕ್ತರಾಗಿದ್ದಾರೆ. ಕೋವಿಡ್ ಹಾಗೂ ಕೋವಿಡ್‌ಯೇತರ ಕಾರಣಗಳಿಂದ ಈವರೆಗೆ 577 ಮಂದಿ ಮೃತಪಟ್ಟಿದ್ದಾರೆ.
ಬುಧವಾರ ದಾಖಲೆಯ 2,838 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 2,824 ವರದಿಗಳು ನೆಗೆಟಿವ್ ಬಂದಿವೆ. 14 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ ಒಂದು ಪ್ರಕರಣ ಹೊರ ಜಿಲ್ಲೆಗೆ ಸೇರಿದೆ. ನಾಲ್ಕು ಪ್ರಕರಣಗಳು ಪರಿಹಾರ ಪೋರ್ಟಲ್‌ನಲ್ಲಿ ಅಪ್‌ಲೋಡ್ ಆಗಿಲ್ಲ. ಹಾಗಾಗಿ, ಒಂಬತ್ತು ಪ್ರಕರಣಗಳನ್ನು ಮಾತ್ರ ಜಿಲ್ಲಾಡಳಿತ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.