ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9 ಹೊಸ ಪ್ರಕರಣ, ಐವರು ಗುಣಮುಖ

Last Updated 30 ಆಗಸ್ಟ್ 2021, 16:43 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ಒಂಬತ್ತು ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಐವರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸೋಂಕಿತರ ಸಂಖ್ಯೆ 72ಕ್ಕೆ ಏರಿದೆ. ಈ ಪೈಕಿ ನಾಲ್ವರು ಐಸಿಯುನಲ್ಲಿ ಹಾಗೂ 15 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,317ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 31,710ಕ್ಕೆ ತಲುಪಿದೆ.

ಸೋಮವಾರ 2,017 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 2,008 ವರದಿಗಳು ನೆಗೆಟಿವ್‌ ಬಂದಿವೆ. ಏಳು ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಹಳೆಯ ಎರಡು ಪ್ರಕರಣ ಸೇರಿಸಿ ಒಂಬತ್ತು ಪ್ರಕರಣಗಳನ್ನು ಜಿಲ್ಲಾಡಳಿತ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT