ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 9 ಹೊಸ ಪ್ರಕರಣ, 8 ಮಂದಿ ಗುಣಮುಖ

Last Updated 27 ನವೆಂಬರ್ 2020, 16:13 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಒಂಬತ್ತು ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಎಂಟು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸದ್ಯ 102 ಮಂದಿ ಸೋಂಕಿತರಿದ್ದು,ಈ ಪೈಕಿ 59 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 10 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ವರದಿಯಾದ ಕೋವಿಡ್‌ ಪ್ರಕರಣಗಳ ಸಂಖ್ಯೆ 6,311ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 6,081ಕ್ಕೆ ತಲುಪಿದೆ. 108 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಕೋವಿಡ್‌ಯೇತರ ಕಾಣರಣಗಳಿಂದ ಮೃತಪಟ್ಟಿದ್ದಾರೆ.

ಶುಕ್ರವಾರ 968 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 960 ಮಂದಿಯ ವರದಿ ನೆಗಟಿವ್‌ ಬಂದಿವೆ. ಎಂಟು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT