ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಒಂಬತ್ತು ಹೊಸ ಕೋವಿಡ್‌ ಪ್ರಕರಣ ದೃಢ

Last Updated 6 ಡಿಸೆಂಬರ್ 2020, 15:15 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಒಂಬತ್ತು ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಅಷ್ಟೇ ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸದ್ಯ 95 ಮಂದಿ ಸೋಂಕಿತರಿದ್ದು, 30 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಖ್ಯೆ ಹೆಚ್ಚಾಗಿದ್ದು, 22 ಮಂದಿ ಇದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 6,424 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 6,201 ಮಂದಿ ಗುಣಮುಖರಾಗಿದ್ದಾರೆ. 120 ಮಂದಿ ಕೋವಿಡ್‌ನಿಂದ 20 ಮಂದಿ ಕೋವಿಡ್‌ಯೇತರ ಕಾರಣದಿಂದ ಮೃತಪಟ್ಟಿದ್ದಾರೆ.

ಭಾನುವಾರ 883 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪ‍ಡಿಸಲಾಗಿದ್ದು, 874 ಮಂದಿಯ ವರದಿ ನೆಗೆಟಿವ್ ಬಂದಿವೆ. ಒಂಬತ್ತು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT