ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 91 ಮಂದಿಗೆ ಕೋವಿಡ್–19 ಇರುವುದು ದೃಢಪಟ್ಟಿದೆ. 77 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಇದುವರೆಗೆ 5,151 ಕೋವಿಡ್–19 ಪ್ರಕರಣಗಳು ವರದಿಯಾಗಿವೆ. 4,290 ಮಂದಿ ಗುಣಮುಖರಾಗಿದ್ದಾರೆ. 753 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 197 ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 43 ಮಂದಿ ಐಸಿಯುನಲ್ಲಿ ಇದ್ದಾರೆ.ಕೋವಿಡ್‌ನಿಂದಾಗಿ 78 ಹಾಗೂ ಬೇರೆ ಅನಾರೋಗ್ಯಗಳಿಂದಾಗಿ 30 ಮಂದಿ ಮೃತಪಟ್ಟಿದ್ದಾರೆ.

ಬುಧವಾರ 1,220 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆರ್‌ಟಿಪಿಸಿಆರ್‌ನಲ್ಲಿ 797, ರ‍್ಯಾಪಿಡ್ ಆ್ಯಂಟಿಜೆನ್‌ನಲ್ಲಿ 423 ಪರೀಕ್ಷೆಗಳನ್ನು ನಡೆಸಲಾಗಿದೆ. 1,129 ಮಂದಿಯ ವರದಿ ನೆಗೆಟಿವ್ ಬಂದಿವೆ. 91 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 77,081 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. 72,032 ಮಂದಿಯ ವರದಿಗಳು ನೆಗೆಟಿವ್ ಬಂದಿವೆ.

69,694 ಮಂದಿಯ ಮೇಲೆ ನಿಗಾ: ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿರುವ 32,438 ಹಾಗೂ ದ್ವಿತೀಯ ಸಂಪರ್ಕ ಹೊಂದಿರುವ 37,256 ಮಂದಿ ಸೇರಿದಂತೆ 69,694 ಮಂದಿ ಮನೆ ಕ್ವಾರಂಟೈನ್‌ನಲ್ಲಿದ್ದು, ಅವರ ಆರೋಗ್ಯದ ಮೇಲೆ ಜಿಲ್ಲಾಡಳಿತ ನಿಗಾ ಇಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.