ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 90 ಮಂದಿ ಸೋಂಕು ಮುಕ್ತ, 26 ಹೊಸ ಪ್ರಕರಣ

Last Updated 29 ಅಕ್ಟೋಬರ್ 2020, 15:47 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 90 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 26 ಹೊಸ ಪ್ರಕರಣಗಳು ದೃಢಪಟ್ಟಿವೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಗಡಿ ಜಿಲ್ಲೆಯಲ್ಲಿ ಇದುವರೆಗೆ 5,910 ಮಂದಿಗೆ ಸೋಂಕು ತಗುಲಿದೆ. 5,559 ಮಂದಿ ಗುಣಮುಖರಾಗಿದ್ದಾರೆ. 104 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದರೆ, ಕೋವಿಡ್‌ಯೇತರ ಕಾರಣದಿಂದ 19 ಮಂದಿ ಕೊನೆಯುಸಿರೆಳೆದಿದ್ದಾರೆ.

ಸದ್ಯ 228 ಸಕ್ರಿಯ ಪ್ರಕರಣಗಳಿವೆ. 121 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 45 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ ಒಂದೇ ದಿನ 1,182 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 1,157 ಮಂದಿತ ವರದಿ ನೆಗೆಟಿವ್‌ ಬಂದಿವೆ. 25 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಒಂದು ಪ್ರಕರಣ ಮೈಸೂರಿನಲ್ಲಿ ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT