ಗುರುವಾರ , ಮಾರ್ಚ್ 30, 2023
32 °C

ಕೋವಿಡ್‌ ಆಸ್ಪತ್ರೆ ಖಾಲಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಮೂರನೇ ದಿನವೂ ಕೋವಿಡ್‌ ಪ್ರಕರಣ ವರದಿಯಾಗಿಲ್ಲ. ಒಬ್ಬರು ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣವೂ ದಾಖಲಾಗಿಲ್ಲ.

ಸೋಂಕಿತರ ಸಂಖ್ಯೆ 6ಕ್ಕೆ ಇಳಿದಿದೆ. ಕೋವಿಡ್‌ ಆಸ್ಪತ್ರೆಯಲ್ಲಿ ಯಾರೂ ಇಲ್ಲ. ಎಲ್ಲರೂ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಬ್ಬರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 

ಮಂಗಳವಾರ 549 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, ಎಲ್ಲ‌ ವರದಿಗಳು ನೆಗಟಿವ್‌ ಬಂದಿವೆ.

ಜಿಲ್ಲೆಯಲ್ಲಿ ಇದುವರೆಗೆ 32,560 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಈ ಪೈಕಿ 32,015 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.