ಶನಿವಾರ, ಜೂನ್ 12, 2021
23 °C

ಮಹದೇಶ್ವರ ಬೆಟ್ಟ: ಎರಡು ದಿನ ದಾಸೋಹ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನಾಲ್ವರು ನೌಕರರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ಪತ್ತೆಯಾಗಿರುವುದರಿಂದ, ಗುರುವಾರ ಮತ್ತು ಶುಕ್ರವಾರ ದಾಸೋಹ ಭವನವನ್ನು ಸೀಲ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಎರಡು ದಿನಗಳ ಕಾಲ ದೇವಾಲಯದಲ್ಲಿ ದಾಸೋಹದ ವ್ಯವಸ್ಥೆ ಇರುವುದಿಲ್ಲ. 

ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಪ್ರಕಟಣೆಯಲ್ಲಿ ಈ ವಿಚಾರ ತಿಳಿಸಿದ್ದಾರೆ. 

‘ಪ್ರಾಧಿಕಾರದ 41 ನೌಕರರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ ನಾಲ್ವರಲ್ಲಿ ಸೋಂಕು ಕಂಡು ಬಂದಿದೆ. ಇವರಲ್ಲಿ ಮೂವರು ದಾಸೋಹದ ಸಿಬ್ಬಂದಿ. ಇನ್ನೊಬ್ಬರು ಕಚೇರಿಯಲ್ಲಿ ಕೆಲಸ ಮಾಡುತ್ತಾರೆ. ಎರಡು ದಿನಗಳ ಕಾಲ ದಾಸೋಹ ಭವನವನ್ನು ಸೀಲ್‌ ಡೌನ್‌ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ, ದಾಸೋಹದ ವ್ಯವಸ್ಥೆ ಸ್ಥಗಿತಗೊಳ್ಳಲಿರುವುದರಿಂದ ಪ್ರಸಾದ ವಿತರಣೆ ಇರುವುದಿಲ್ಲ. ಕಚೇರಿಯನ್ನು ಒಂದು ದಿನ ಸೀಲ್‌ಡೌನ್‌ ಮಾಡಲಾಗುವುದು’ ಎಂದು ಅವರು ಹೇಳಿದ್ದಾರೆ. 

ದೇವಾಲಯ ಎಂದಿನಂತೆ ಭಕ್ತರಿಗೆ ತೆರೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ದರ್ಶನ ಪಡೆಯಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು