ಶನಿವಾರ, ಸೆಪ್ಟೆಂಬರ್ 25, 2021
22 °C

ಭೀಮನ ಅಮಾವಾಸ್ಯೆ: ಬೆಟ್ಟಕ್ಕಿಲ್ಲ ಪ್ರವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ಹಾಗೂ ಶ್ರಾವಣ ಮಾಸದ ಅಂಗವಾಗಿ ನಡೆಯುವ ಧಾರ್ಮಿಕ ವಿಧಿವಿಧಾನಗಳ ಸಂದರ್ಭದಲ್ಲಿ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶಿಸಿದ್ದಾರೆ. 

ಅದರಂತೆ, ಇದೇ 6ರಿಂದ (ಶುಕ್ರವಾರ) 9ರ (ಸೋಮವಾರ) ಮಧ್ಯಾಹ್ನ 3 ಗಂಟೆಯವರೆಗೆ ಅರ್ಚಕರು, ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕಾರ್ಯನಿಮಿತ್ತ ಬೆಟ್ಟಕ್ಕೆ ಭೇಟಿ ನೀಡುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಬಿಟ್ಟು ಬೇರೆಯಾರಿಗೂ ಪ್ರವೇಶಕ್ಕೆ ಅವಕಾಶ ಇಲ್ಲ. 

ಶುಕ್ರವಾರದಿಂದ ಭಾನುವಾರದವರೆಗೆ ದೇವಾಲಯದಲ್ಲಿ ಎಣ್ಣೆಮಜ್ಜನ ಸೇವೆ, ಭೀಮನ ಅಮಾವಾಸ್ಯೆಯ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿವೆ. ಶ್ರಾವಣ ಮಾಸದ ಪ್ರಯುಕ್ತ ಸೋಮವಾರ ಬೆಳಿಗ್ಗೆ ಸ್ವಾಮಿಗೆ 108 ಕುಂಭಾಭಿಷೇಕ, ಸಹಸ್ರ ಅಭಿಷೇಕಗಳು ನಡೆಯಲಿವೆ. ಪ್ರತಿ ವರ್ಷ ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಕೋವಿಡ್‌ ಸಂದರ್ಭದಲ್ಲಿ ಭಕ್ತರ ನಿಯಂತ್ರಣ ಕಷ್ಟವಾಗಲಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಭಕ್ತರ ಪ್ರವೇಶ ನಿರ್ಬಂಧಿಸಿದೆ. 

ಎಲ್ಲ ವಿಧಿವಿಧಾನಗಳು ದೇವಾಲಯದ ಆವರಣಕ್ಕೆ ಸೀಮಿತವಾಗಿ ಸಾಂಪ್ರದಾಯಿಕವಾಗಿ ಶಾಸ್ತ್ರಬಧ್ಧವಾಗಿವಾಗಿ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು