ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾವಶ್ಯಕ ತಿರುಗಾಡುವವರಿಗೆ ಸಿಗುತ್ತಿಲ್ಲ ಪೆಟ್ರೋಲ್‌

Last Updated 30 ಮಾರ್ಚ್ 2020, 15:25 IST
ಅಕ್ಷರ ಗಾತ್ರ

ಚಾಮರಾಜನಗರ: ದಿಗ್ಬಂಧನದ ನಿಯಮಗಳನ್ನು ಉಲ್ಲಂಘಿಸಿ ವಾಹನಗಳಲ್ಲಿ ಅನಗತ್ಯವಾಗಿ ರಸ್ತೆಗಳಲ್ಲಿ ತಿರುಗಾಡುವವರಿಗೆ ಜಿಲ್ಲೆಯಲ್ಲಿ ಇನ್ನು ಮುಂದೆ ಪೆಟ್ರೋಲ್‌, ಡೀಸೆಲ್‌ ಸಿಗುವುದಿಲ್ಲ.

ತುರ್ತು, ಅಗತ್ಯ ಸೇವೆ ಒದಗಿಸುವ ಹಾಗೂ ಸರಕು ಸಾಗಣೆ ವಾಹನಗಳಿಗೆ ಮಾತ್ರ ಇಂಧನ ಮಾರಾಟ ಮಾಡಬೇಕು ಎಂದು ಪೊಲೀಸರು ಜಿಲ್ಲೆಯಲ್ಲಿರುವ ಎಲ್ಲ ಪೆಟ್ರೋಲ್‌ ಬಂಕ್‌ ಮಾಲೀಕರಿಗೆ ಸೂಚನೆ ನೀಡಿದ್ದಾರೆ. ಒಂದು ವೇಳೆ ಇದನ್ನು ಉಲ್ಲಂಘಿಸಿದರೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ.

ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ದಿಗ್ಬಂಧನ ಹೇರಲಾಗಿದ್ದರೂ, ಕೆಲವ‌ರು ಇದನ್ನು ಗಂಭೀರವಾಗಿ ಪರಿಗಣಿಸದೆ ಅನಗತ್ಯವಾಗಿ ಓಡಾಡುತ್ತಿದ್ದಾರೆ. ಇದನ್ನು ತ‍ಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಹೊಸ ನಿಯಮ ಸೋಮವಾರದಿಂದಲೇ ಜಾರಿಗೆ ಬಂದಿದೆ. ಪೆಟ್ರೋಲ್‌ ಬಂಕ್‌ಗಳು ತೆರೆದಿದ್ದರೂ ಸಿಬ್ಬಂದಿ ಅಗತ್ಯ ಸೇವೆ, ಪಾಸ್‌ ಹೊಂದಿರುವ ವಾಹನಗಳಿಗೆ ಮಾತ್ರ ಪೆಟ್ರೋಲ್‌, ಡೀಸೆಲ್‌ ಹಾಕುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT