ಶುಕ್ರವಾರ, ಮೇ 14, 2021
32 °C

ಮಹದೇಶ್ವರ ಬೆಟ್ಟ: ಯುಗಾದಿ ಜಾತ್ರೆ ರಥೋತ್ಸವ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಆರಂಭವಾಗಿರುವ ಯುಗಾದಿ ಜಾತ್ರೆಯ ಅಂಗವಾಗಿ ಇದೇ 13ರಂದು ನಡೆಯಬೇಕಿದ್ದ ರಥೋತ್ಸವವನ್ನು ರದ್ದು ಮಾಡಲಾಗಿದೆ. 

ಕೋವಿಡ್‌ ಕಾರಣದಿಂದ ಗರಿಷ್ಠ 500 ಜನರ ಮಿತಿಗೆ ಒಳಪಟ್ಟು ಜಾತ್ರೆ ನಡೆಸಲು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

ರಥವನ್ನು ಎಳೆಯಲು 500ರಿಂದ 1000 ಜನರು ಬೇಕು. ರಥೋತ್ಸವ ನಡೆಸಿದರೆ ಕನಿಷ್ಠ 3000 ಜನರು ಸೇರಲಿದ್ದಾರೆ. ಕೋವಿಡ್‌ ಕಾರಣಕ್ಕೆ ಅಷ್ಟು ಜನರಿಗೆ ಅವಕಾಶ ನೀಡಲು ಸಾಧ್ಯವಾಗದೇ ಇರುವುದರಿಂದ ರಥೋತ್ಸವವನ್ನು ರದ್ದುಗೊಳಿಸಿ ಮಲೆ ಮಹದೇಶ್ವರಸ್ವಾಮಿ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.

ಶನಿವಾರದಿಂದ ಜಾತ್ರೆಯ ವಿಧಿ ವಿಧಾನಗಳು ಆರಂಭವಾಗಿದ್ದು, 13ರವರೆಗೆ ನಡೆಯಲಿವೆ. 

‘ಕೋವಿಡ್‌ ನಿಯಂತ್ರಣ ಮಾನದಂಡಗಳಿಗೆ ಒಳಪ‍ಟ್ಟು, ಗರಿಷ್ಠ 500 ಜನರ ಮಿತಿಯಲ್ಲಿ ಜಾತ್ರೆಯು ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ನಡೆಯಲಿದೆ. ಜಾತ್ರೆಗೆ ಸಂಬಂಧಿಸಿದ ಎಲ್ಲ ಉತ್ಸವಗಳು ನಡೆಯಲಿದೆ. ದೇವಸ್ಥಾನದ ಅರ್ಚಕರು, ಪ್ರಾಧಿಕಾರದ ಸಿಬ್ಬಂದಿ, ಸ್ಥಳೀಯ ನಿವಾಸಿಗಳು, ಸರ್ಕಾರಿ ಕೆಲಸದ ನಿಮಿತ್ತ ಬರುವ ಅಧಿಕಾರಿಗಳು ಹಾಗೂ ವಿಶೇಷ ಆಹ್ವಾನಿತರಿಗೆ ಮಾತ್ರ ಅವಕಾಶ ಇದೆ. ಜಿಲ್ಲೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ಜಯವಿಭವಸ್ವಾಮಿ ಅವರು ಹೇಳಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು