ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ ಯೋಜನೆ ಸದ್ಬಳಕೆಗೆ ಸೂಚನೆ 

Published 2 ಫೆಬ್ರುವರಿ 2024, 15:43 IST
Last Updated 2 ಫೆಬ್ರುವರಿ 2024, 15:43 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಸಮೀಪದ ಮಂಗಲ ಗ್ರಾಮ ಪಂಚಾಯಿತಿಯಲ್ಲಿ 2022-23ನೇ ಸಾಲಿನ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆ ಸಾಮಾಜಿಕ ಪರಿಶೋಧನೆ ಗ್ರಾಮಸಭೆ ಈಚೆಗೆ ನಡೆಯಿತು.

 ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ ಮಾತನಾಡಿ, ‘ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಪ್ರದೇಶದ ಜನರಿಗೆ ವರದಾನವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಲ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಸ್ಥರು ತಮ್ಮ ಗ್ರಾಮಗಳಿಗೆ ಅವಶ್ಯಕವಾಗಿರುವ ಕಾಮಗಾರಿಗಳ ಜತೆಗೆ ವೈಯಕ್ತಿಕ ಕಾಮಗಾರಿಗಳಿಗೆ ಅರ್ಜಿ ನೀಡಿ ಕ್ರಿಯಾ ಯೋಜನೆಗೆ ಸೇರಿಸಿ ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ನರೇಗಾ ತಾಲ್ಲೂಕು ಕಾರ್ಯಕ್ರಮಾಧಿಕಾರಿ ನಾರಾಯಣ ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಗೆ ಮಂಗಲಹೊಸೂರು, ಕರಡಿಮೋಳೆ, ಯಡಿಯೂರು, ಹುಲ್ಲೇಪುರ, ಮಹಾತಾಳಪುರ, ಮಂಗಲ ಗ್ರಾಮಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಶಾಲಾ ಆಟದ ಮೈದಾನ ಅಭಿವೃದ್ದಿ, ಶೌಚಾಲಯ, ಚರಂಡಿ, ರಸ್ತೆ,  ಸೆಸ್ಕ್, ಜಮೀನು ಅಭಿವೃದ್ಧಿ ಸೇರಿ 60ಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ನಡೆದಿರುವ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ’ ಎಂದು ತಿಳಿಸಿದರು.

ನೋಡಲ್ ಅಧಿಕಾರಿ ಸುರೇಶ್, ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಪ್ರೇಮ, ಸದ್ಯಸರಾದ ಚಿನ್ನತಾಯಮ್ಮ, ರಾಜಶೇಖರ್, ಅಭಿವೃದ್ದಿ ಅಧಿಕಾರಿ ಆದಿಶೇಷಮೂರ್ತಿ, ಕಾರ್ಯದರ್ಶಿ ಟಿ.ನಾಗರಾಜು, ನರೇಗಾ ಇಂಜಿನಿಯರ್ ರಮೇಶ್, ಬಿಲ್‌ಕಲೆಕ್ಟರ್ ಕೃಷ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT