ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಸದ ವಿ.ಶ್ರೀನಿವಾಸ ಪ್ರಸಾದ್‌ಗೆ ಶ್ರದ್ಧಾಂಜಲಿ

Published 30 ಏಪ್ರಿಲ್ 2024, 14:42 IST
Last Updated 30 ಏಪ್ರಿಲ್ 2024, 14:42 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆ ಪದಾಧಿಕಾರಿಗಳು ಮತ್ತು ಹೌಸಿಂಗ್ ಬೋರ್ಡ್ ಕಾಲೊನಿ ನಿವಾಸಿಗಳು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. 

ಹೌಸಿಂಗ್ ಬೋರ್ಡ್ ಕಾಲೊನಿಯ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದ ಮುಂದೆ ಸೋಮವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಶ್ರೀನಿವಾಸ ಪ್ರಸಾದ್‌ ಅವರ ಬೃಹತ್‌ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ಪುಷ್ಪನಮನ ಸಲ್ಲಿಸಿದರು. 

ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು ಶ್ರೀನಿವಾಸ ಪ್ರಸಾದ್‌ ಅವರ ಸಾಧನೆಗಳನ್ನು ಸ್ಮರಿಸಿದರು. 

ಎಸ್‌.ಪಿ.ಬಾಲ ಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆಯ ಅಧ್ಯಕ್ಷ ಶಿವಣ್ಣ, ಎಚ್.ಎಂ.ಬಂಗಾರು, ಫ್ರೆಂಡ್ಸ್ ಮ್ಯೂಸಿಕ್ ದೊರೆರಾಜ್, ನಾಗಯ್ಯ ಕುಮಾರ್, 26ನೇ ವಾರ್ಡ್‌ನ ನಗರಸಭಾ ಸದಸ್ಯೆ ಕುಮುದಾ, ಶಿಕ್ಷಕರ ಸಂಘದ ಅಧ್ಯಕ್ಷ ರಾಮಸ್ವಾಮಿ, ಕೃಷ್ಣಮೂರ್ತಿ, ಪುಟ್ಟಸ್ವಾಮಿ, ಶಾಂತರಾಜು, ಶಿವಮೂರ್ತಿ, ದೊರೆಸ್ವಾಮಿ, ಕಲಾವಿದರಾದ ಕೃಷ್ಣಯ್ಯ, ಚನ್ನಯ್ಯ ಇತರರು ಭಾಗವಹಿಸಿದ್ದರು. 

ರೈಲ್ವೆ ಮೇಲ್ಸೇತುವೆಗೆ ಹೆಸರಿಡಲು ಒತ್ತಾಯ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನಂಜನಗೂಡಿನಲ್ಲಿ ನಿರ್ಮಿಸಲಾಗಿರುವ ಹೊಸ ರೈಲ್ವೆ ಮೇಲ್ಸೇತುವೆಗೆ ಶ್ರೀನಿವಾಸ ಪ್ರಸಾದ್ ಅವರ ಹೆಸರು ಇಡಬೇಕು ಎಂದು ಚಾಮರಾಜನಗರ ನಗರಸಭೆ ಮಾಜಿ ಅಧ್ಯಕ್ಷ ಸುರೇಶ ನಾಯಕ ಒತ್ತಾಯಿಸಿದ್ದಾರೆ.

‘ಚಾಮರಾಜನಗರ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿದ್ದ ಅವರು ಕ್ಷೇತ್ರಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ನಮ್ಮದೇ ಆದ ನಾಯಕತ್ವ ಹಾಗೂ ವರ್ಚಸ್ಸು ಹೊಂದಿದ್ದರು. ನಂಜನಗೂಡಿನಲ್ಲಿ ನಿರ್ಮಿಸಿರುವ ರೈಲ್ವೆ ಮೇಲ್ಸೇತುವೆಗೆ ಅವರ ಹೆಸರು ಇಟ್ಟು ಅವರಿಗೆ ಗೌರವ ಸೂಚಿಸಬೇಕು’ ಎಂದು ಅವರು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT