ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಪೃಶ್ಯತೆ: ಹೆಗ್ಗೋಠಾರಗೆ ಅಧಿಕಾರಿಗಳ ಭೇಟಿ

Last Updated 25 ನವೆಂಬರ್ 2022, 16:02 IST
ಅಕ್ಷರ ಗಾತ್ರ

ಚಾಮರಾಜನಗರ: ಇತ್ತೀಚೆಗೆ ಅಸ್ಪೃಶ್ಯತೆ ಆಚರಣೆ ವರದಿಯಾದ ತಾಲ್ಲೂಕಿನ ಹೆಗ್ಗೋಠಾರ ಗ್ರಾಮಕ್ಕೆ ಉಪವಿಭಾಗಾಧಿಕಾರಿ ಗೀತಾ ಹುಡೇದಾ, ತಹಶೀಲ್ದಾರ್‌ ಬಸವರಾಜು, ಪೊಲೀಸ್‌ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಶುಕ್ರವಾರ ಭೇಟಿ ನೀಡಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಮಾತುಕತೆ ನಡೆಸಿದರು.

‘ಪರಿಶಿಷ್ಟ ಜಾತಿ, ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ನಡುವೆ ಶಾಂತಿ ಸಭೆಯನ್ನು ನಡೆಸಲು ಜಿಲ್ಲಾಡಳಿತ ಬಯಸಿತ್ತು. ಆದರೆ, ಸಭೆ ನಡೆದಿಲ್ಲ’ ಎಂದು ಸ್ಥಳೀಯರು ಹೇಳಿದ್ದಾರೆ. ಇದಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

ಗ್ರಾಮಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಪ್ರತ್ಯೇಕವಾಗಿ ಎರಡೂ ಸಮುದಾಯಗಳ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ‘ಪ್ರಜಾವಾಣಿ’ ಜೊತೆ ಮಾತನಾಡಿದ ತಹಶೀಲ್ದಾರ್‌ ಬಸವರಾಜು, ‘ಇತ್ತೀಚೆಗೆ ನಡೆದಿರುವ ಘಟನೆಯ ನಂತರ ಗ್ರಾಮದಲ್ಲಿ ಸ್ಥಿತಿ ಗತಿ ಅವಲೋಕಿಸಲು ಭೇಟಿ ನೀಡಿದ್ದೆವು. ಎಲ್ಲರೊಂದಿಗೂ ಮಾತನಾಡಿದ್ದೇವೆ. ಗ್ರಾಮದಲ್ಲಿ ಸಂಘರ್ಷ ಇಲ್ಲದೆ ಎಲ್ಲರೂ ಒಟ್ಟಾಗಿದ್ದೇವೆ ಎಂದು ಮುಖಂಡರು ಹೇಳಿದ್ದಾರೆ. ಗ್ರಾಮದಲ್ಲಿ ಇನ್ನೂ ಕೆಲವು ಸಮಸ್ಯೆಗಳಿರುವ ಬಗ್ಗೆ ಪರಿಶಿಷ್ಟ ಸಮುದಾಯದವರು ಪ್ರಸ್ತಾಪಿಸಿದ್ದರು. ಮುಂದಿನ ದಿನಗಳಲ್ಲಿ ಅವುಗಳನ್ನೂ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT