ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ತೈಲ ಬೆಲೆ ಏರಿಕೆ: ಕರ್ನಾಟಕ ಸೇನಾಪಡೆ ತಮಟೆ ಚಳವಳಿ

ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು
Published 19 ಜೂನ್ 2024, 13:50 IST
Last Updated 19 ಜೂನ್ 2024, 13:50 IST
ಅಕ್ಷರ ಗಾತ್ರ

ಚಾಮರಾಜನಗರ: ಪೆಟ್ರೋಲ್‌ ಹಾಗೂ ಡೀಸೆಲ್ ದರ ಹೆಚ್ಚಳ ಖಂಡಿಸಿ ಬುಧವಾರ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ತಮಟೆ ಚಳವಳಿ ನಡೆಸಲಾಯಿತು.

ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮಟೆ ಬಾರಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಮಾಡಿರುವುದು ಖಂಡನೀಯ. ಒಂದು ಕಡೆ ಜನತೆಗೆ ಉಚಿತ ಯೋಜನೆಗಳನ್ನು ನೀಡಿ, ಮತ್ತೊಂದು ಕಡೆ ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡುತ್ತಿರುವ ಸರ್ಕಾರ ಕೊಟ್ಟಿದ್ದನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. 

ಕೂಡಲೇ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸಬೇಕು ಇಲ್ಲದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಚಾರಂ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ  ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜ್, ಮಹೇಶಗೌಡ, ಗು.ಪುರುಷೋತ್ತಮ್, ಚಾ.ವೆಂ.ರಾಜಗೋಪಾಲ್, ನಾಗೇಂದ್ರಗೌಡ, ಅರುಣ್ ಕುಮಾರ್ ಗೌಡ, ಮಂಜು, ಲೋಕೇಶ್, ಭೂಪತಿ,  ತಾಂಡವಮೂರ್ತಿ, ಆಟೋ ಲಿಂಗರಾಜು, ವೀರಭದ್ರ, ಪ್ರಕಾಶ್ ಸಾಗರ್ ರಾವತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT