ಹನೂರು (ಚಾಮರಾಜನಗರ ಜಿಲ್ಲೆ): ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ತಾಲ್ಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ವೃದ್ಧೆ ರಂಗಮ್ಮ(82) ಮೃತಪಟ್ಟಿದ್ದಾರೆ.
ಮನೆಯಲ್ಲಿ ಮಲಗಿದ್ದಾಗ ಭಾರಿ ಮಳೆಗೆ ಗೋಡೆ ಕುಸಿದು ರಂಗಮ್ಮ ಅವರ ಮೇಲೆ ಬಿದ್ದಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಕ್ಕಳಾದ ಲಕ್ಷ್ಮಮ್ಮ ಹಾಗೂ ರಂಗಯ್ಯ ಗೋಡೆ ಕುಸಿದ ಶಬ್ದಕ್ಕೆ ಎಚ್ಚರಗೊಂಡು ಮನೆಯಿಂದ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಮರಾಜನಗರದಲ್ಲಿ ಚೆನ್ನಾಪುರದ ಮೊಳೆ ರಸ್ತೆ, ಬಿ.ರಾಚಯ್ಯ ಜೋಡಿ ರಸ್ತೆ, ಕರಿನಂಜನಪುರ ಬಡಾವಣೆಗಳಿಗೆ ನೀರು ನುಗ್ಗಿತ್ತು. ರಸ್ತೆಗಳು ಜಲಾವೃತಗೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.