ಸೋಮವಾರ, ಸೆಪ್ಟೆಂಬರ್ 20, 2021
26 °C

ಚಾಮರಾಜನಗರ: ಗಾಂಜಾ ಮಾರಾಟ ಯತ್ನ, ಒಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು  ತಾಲ್ಲೂಕಿನ ಪುಣಜನೂರು ವ್ಯಾಪ್ತಿಯ ಬಾನವಾಡಿ ಗ್ರಾಮದಲ್ಲಿ ಅಬಕಾರಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. 

ಚಿಕ್ಕಣ್ಣ ಬಂಧಿತ ವ್ಯಕ್ತಿ. ಅವರ ಬಳಿಯಿಂದ 210 ಗ್ರಾಂ ಒಣ ಗಾಂಜಾ ಜಪ್ತಿ ಮಾಡಲಾಗಿದೆ. ಅರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಬಕಾರಿ ಇನ್‌ಸ್ಪೆಕ್ಟರ್‌ ಸಿ.ಎಂ.ಮಹದೇವು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಹನುವಂತ ಸಿಂಗ್, ಸಿಬ್ಬಂದಿಗಳಾದ ಸಿದ್ದರಾಜು, ಯಶೋಧ, ಸಂತೋಷ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು