ಚಾಮರಾಜನಗರ: ಮೂವರು ಗುಣಮುಖ, ಒಬ್ಬರಿಗೆ ಕೋವಿಡ್

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ಮೂವರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. ಸಾವು ಸಂಭವಿಸಿಲ್ಲ.
ಸದ್ಯ ಜಿಲ್ಲೆಯಲ್ಲಿ 14 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 11 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಯಾರೂ ಇಲ್ಲ.
ಜಿಲ್ಲೆಯಲ್ಲಿ ಇದುವರೆಗೆ 6,917 ಕೋವಿಡ್ ಪ್ರಕರಣಗಳು ವರದಿಯಾಗಿವೆ. 6,771 ಮಂದಿ ಗುಣಮುಖರಾಗಿದ್ದಾರೆ. 112 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಇತರ ಕಾರಣಗಳಿಂದ ಮೃತಪಟ್ಟಿದ್ದಾರೆ.
ಸೋಮವಾರ 565 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 564 ವರದಿಗಳು ನೆಗೆಟಿವ್ ಬಂದಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.