ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಒಬ್ಬರಿಗೆ ಕೋವಿಡ್‌ ದೃಢ

Last Updated 5 ನವೆಂಬರ್ 2021, 5:28 IST
ಅಕ್ಷರ ಗಾತ್ರ

ಚಾಮರಾಜನಗರ: ನಾಲ್ಕು ದಿನದ ಬಳಿಕ ಜಿಲ್ಲೆಯಲ್ಲಿ ಗುರುವಾರ ಒಂದು ಕೋವಿಡ್‌ ಪ್ರಕರಣ ವರದಿಯಾಗಿದೆ. ಚಾಮರಾಜನಗರ ತಾಲ್ಲೂಕಿನ ಒಬ್ಬರಿಗೆ ಸೋಂಕು ಇರುವುದು ಖಚಿತವಾಗಿದೆ. ಯಾರೂ ಗುಣಮುಖರಾಗಿಲ್ಲ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಒಂದು ಹೆಚ್ಚಳವಾಗಿದೆ. ಸದ್ಯ ಜಿಲ್ಲೆಯಲ್ಲಿ ಆರು ಮಂದಿ ಸೋಂಕಿತರಿದ್ದಾರೆ. ಒಬ್ಬರು ಆಸ್ಪತ್ರೆಯಲ್ಲಿದ್ದು, ಐವರು ಮನೆಯಲ್ಲೇ ಇದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,561ಕ್ಕೆ ಏರಿದೆ. 32,016 ಮಂದಿ ಗುಣಮುಖರಾಗಿದ್ದಾರೆ. ಗುರುವಾರ 1,104 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಒಬ್ಬರಿಗೆ ಸೋಂಕು ಖಚಿತವಾಗಿದ್ದು, ಉಳಿದವರ ವರದಿ ನೆಗೆಟಿವ್‌ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT