ಭಾನುವಾರ, ಮೇ 29, 2022
30 °C

ಇಳಿದ ಪ್ರಕರಣಗಳ ಸಂಖ್ಯೆ, ಒಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಮತ್ತೊಂದು ಸಾವು ಸಂಭವಿಸಿದೆ. ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದ 60 ವರ್ಷದ ವ್ಯಕ್ತಿಯೊಬ್ಬರು ಗುರುವಾರ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಗುರುವಾರವೇ ಆಸ್ಪತ್ರೆಗೆ ದಾಖಲಾಗಿದ್ದರು. 

ಮೂರನೇ ಅಲೆಯಲ್ಲಿ ಸಂಭವಿಸಿದ ಆರನೇ ಸಾವಿನ ಪ್ರಕರಣ ಇದು.

ಶನಿವಾರ ಜಿಲ್ಲೆಯಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. 

1,842 ಮಂದಿಯ ಪರೀಕ್ಷಾ ವರದಿ ಬಂದಿದ್ದು, 692 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 462 ಮಂದಿ ಗುಣಮುಖರಾಗಿದ್ದಾರೆ. 

ಸಕ್ರಿಯ ಪ್ರಕರಣಗಳ ಸಂಖ್ಯೆ 4,787ಕ್ಕೆ ಏರಿದೆ. ಸೋಂಕಿತರ ಪೈಕಿ 3,644 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಮೂವರು ಐಸಿಯುನಲ್ಲಿದ್ದಾರೆ. 

ಶುಕ್ರವಾರ ದೃಢಪಟ್ಟ 692 ಸೋಂಕಿತರಲ್ಲಿ 143 ಮಕ್ಕಳಿದ್ದಾರೆ. ಚಾಮರಾಜನಗರ ತಾಲ್ಲೂಕಿನಲ್ಲಿ 282, ಹನೂರಿನಲ್ಲಿ 192, ಗುಂಡ್ಲುಪೇಟೆಯಲ್ಲಿ 88, ಕೊಳ್ಳೇಗಾಲದಲ್ಲಿ 83 ಮತ್ತು ಯಳಂದೂರು ತಾಲ್ಲೂಕಿನಲ್ಲಿ 46 ಪ್ರಕರಣಗಳು ವರದಿಯಾಗಿವೆ.

ಗುಣಮುಖರಾದ 462 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 180, ಗುಂಡ್ಲುಪೇಟೆಯ 78, ಕೊಳ್ಳೇಗಾಲದ 75, ಹನೂರಿನ 68, ಯಳಂದೂರಿನ 49 ಹಾಗೂ ಹೊರ ಜಿಲ್ಲೆಗಳ 12 ಮಂದಿ ಇದ್ದಾರೆ. 

ಶುಕ್ರವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಕೋವಿಡ್‌ ಪ್ರಕರಣಗಳ ಸಂಖ್ಯೆ 39,589ಕ್ಕೆ ಏರಿಕೆಯಾಗಿದೆ. ಸೋಂಕು ಮುಕ್ತರಾದವರ ಸಂಖ್ಯೆ 34,255ಕ್ಕೆ ಹಿಗ್ಗಿದೆ. ಕೋವಿಡ್‌ ಹಾಗೂ ಕೋವಿಡ್‌ಯೇತರ ಕಾರಣಗಳಿಂದ 588 ಮಂದಿ ಮೃತಪಟ್ಟಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.