ಭಾನುವಾರ, ಅಕ್ಟೋಬರ್ 25, 2020
28 °C

ಚಾಮರಾಜನಗರ: 65 ಹೊಸ ಪ್ರಕರಣ, 34 ಮಂದಿ ಗುಣಮುಖ, ಒಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ಕೋವಿಡ್‌ನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ. 65 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. 34 ಮಂದಿ ಗುಣಮುಖರಾಗಿದ್ದಾರೆ.

ಮೈಸೂರಿನ ನಿವಾಸಿ 57 ವರ್ಷದ ಪುರುಷ ಅ.11ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದು, ಅದೇ ದಿನ ಮೃತಪಟ್ಟಿದ್ದಾರೆ. 

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಮೃತಪಟ್ಟವರ ಸಂಖ್ಯೆ 75ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 30 ಮಂದಿ ಕೊನೆಯುಸಿರೆಳೆದಿದ್ದಾರೆ. 

5000ದ ಸನಿಹಕ್ಕೆ ಪ್ರಕರಣಗಳು: ಸೋಮವಾರ ದೃಢಪಟ್ಟ 65 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೆ 4,991 ಪ್ರಕರಣಗಳು ದೃಢಪಟ್ಟಿವೆ. 4,414 ಮಂದಿ ಗುಣಮುಖರಾಗಿದ್ದಾರೆ. 742 ಸಕ್ರಿಯ ಪ್ರಕರಣಗಳಿದ್ದು, 221 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 36 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ 323 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 259 ಮಂದಿಯ ವರದಿಗಳು ನೆಗೆಟಿವ್‌ ಬಂದಿದೆ. 65 ಮಂದಿಗೆ ಸೋಂಕು ಇರುವುದು ಖಚಿತವಾಗಿದ್ದು, ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.