ಬುಧವಾರ, ನವೆಂಬರ್ 25, 2020
24 °C

ಚಾಮರಾಜನಗರ: 15 ಪ್ರಕರಣ, ಒಂದು ಸಾವು, 66 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಕೋವಿಡ್‌ನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ. 66 ಮಂದಿ ಗುಣಮುಖರಾಗಿದ್ದಾರೆ. 15 ಹೊಸ  ಪ್ರಕರಣಗಳು ದೃಢಪಟ್ಟಿವೆ.

ಇದರೊಂದಿಗೆ ಜಿಲ್ಲೆಯಲ್ಲಿ ದೃಢಪಟ್ಟ ಪ್ರಕರಣ ಸಂಖ್ಯೆ 6,074ಕ್ಕೆ ಏರಿದೆ. 5,801 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ಕಾರಣದಿಂದ 106 ಹಾಗೂ ಕೋವಿಡ್‌ಯೇತರ ಕಾರಣದಿಂದ 19 ಮಂದಿ ಮೃತಪಟ್ಟಿದ್ದಾರೆ. ಸದ್ಯ 148 ಸಕ್ರಿಯ ಪ್ರಕರಣಗಳಿವೆ. 27 ಮಂದಿ ಐಸಿಯುನಲ್ಲಿದ್ದಾರೆ. 105 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 

ಚಾಮರಾಜನಗರ ತಾಲ್ಲೂಕು ಮಲ್ಲಯ್ಯನಪುರ ಗ್ರಾಮದ 54 ವರ್ಷದ ವ್ಯಕ್ತಿ 23ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಮೃತಪಟ್ಟಿದ್ದಾರೆ. 

ಲಕ್ಷದ ಸನಿಹಕ್ಕೆ ಪರೀಕ್ಷೆ: ಗುರುವಾರ 1,226 ಮಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 1,213 ಮಂದಿಯ ವರದಿ ನೆಗೆಟಿವ್‌ ಬಂದಿವೆ. 13 ಮಂದಿಗೆ ಸೋಂಕು ತಗಲಿರುವುದು ಖಚಿತವಾಗಿದೆ. ಮೈಸೂರು ಹಾಗೂ ಬೆಂಗಳೂರಿನಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇದುವರೆಗೆ 99,411 ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 93,492 ಮಂದಿಯ ವರದಿ ನೆಗೆಟಿವ್‌ ಬಂದಿದೆ. ಶುಕ್ರವಾರ ಒಟ್ಟು ಪರೀಕ್ಷೆಗಳ ಸಂಖ್ಯೆ ಒಂದು ಲಕ್ಷ ದಾಟುವುದು ಖಚಿತ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.