ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್: ಚಾಮರಾಜನಗರದಲ್ಲಿ ಒಬ್ಬರು ಸಾವು, 47 ಹೊಸ ಪ್ರಕರಣ

3000 ದಾಟಿದ ಗುಣಮುಖರಾದವರ ಸಂಖ್ಯೆ, 654 ಸಕ್ರಿಯ ಪ್ರಕರಣಗಳು
Last Updated 25 ಸೆಪ್ಟೆಂಬರ್ 2020, 15:16 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 47 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 26 ಮಂದಿ ಸೋಂಕು ಮುಕ್ತರಾಗಿದ್ದಾರೆ. ಒಬ್ಬರು ಮೃತಪ‍ಟ್ಟಿದ್ದಾರೆ.

ತಾಲ್ಲೂಕಿನ ಕುದೇರು ಗ್ರಾಮದ ನಿವಾಸಿ 55 ವರ್ಷದ ಮಹಿಳೆ ಸೆ. 6ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 60ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 26 ಮಂದಿ ಪ್ರಾಣಕಳೆದುಕೊಂಡಿದ್ದಾರೆ.

ಶುಕ್ರವಾರದ 47 ಹೊಸ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಈವರೆಗೆ 3,743 ಪ್ರಕರಣಗಳು ದೃಢಪಟ್ಟಿವೆ. ಗುಣಮುಖರಾದವರ ಸಂಖ್ಯೆ 3000ದ ಗಡಿ ದಾಟಿದೆ. ಇದುವರೆಗೆ 3,004 ಮಂದಿ ಸೋಂಕು ಮುಕ್ತರಾಗಿದ್ದಾರೆ. 654 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 319 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 28 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ 567 ಮಂದಿ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದ್ದು, 520 ಮಂದಿಯ ವರದಿ ನೆಗೆಟಿವ್‌ ಬಂದಿವೆ. 47 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT