ಭಾನುವಾರ, ಮೇ 22, 2022
22 °C

ಚಾಮರಾಜನಗರ: ಕೋವಿಡ್‌ನಿಂದ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಒಂದೂವರೆ ತಿಂಗಳ ಬಳಿಕ ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಸಂಭವಿಸಿದೆ. ಚಾಮರಾಜನಗರ ತಾಲ್ಲೂಕು ಚೆನ್ನಪ್ಪನಪುರ ಗ್ರಾಮದ 60 ವರ್ಷದ ಮಹಿಳೆ ಶುಕ್ರವಾರ ಮೃತಪಟ್ಟಿದ್ದಾರೆ. 

ಮಹಿಳೆ, ಜನವರಿ 29ರಂದು ನಗರದ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸಿದೆ ಕೊನೆಯುಸಿರೆಳೆದಿದ್ದಾರೆ. ಇದಕ್ಕೂ ಮೊದಲು ಡಿಸೆಂಬರ್‌ 17ರಂದು ಸಾವಿನ ಪ್ರಕರಣ ವರದಿಯಾಗಿತ್ತು. 

ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 112ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣಗಳಿಂದ 20 ಮಂದಿ ನಿಧನರಾಗಿದ್ದಾರೆ. 

ಈ ಮಧ್ಯೆ, ಶನಿವಾರ ಜಿಲ್ಲೆಯಲ್ಲಿ ಐದು ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇಬ್ಬರು ಗುಣಮುಖರಾಗಿದ್ದಾರೆ. ಸದ್ಯ 15 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ ಎಂಟು ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 

ಜಿಲ್ಲೆಯಲ್ಲಿ ಇದುವರೆಗೆ 6,914 ಮಂದಿಗೆ ಸೋಂಕು ತಗುಲಿದೆ. 6,767 ಮಂದಿ ಗುಣಮುಖರಾಗಿದ್ದಾರೆ. 

ಶನಿವಾರ 929 ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 924 ಮಂದಿಯ ವರದಿ ನೆಗೆಟಿವ್‌ ಬಂದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.