ಬುಧವಾರ, ನವೆಂಬರ್ 25, 2020
25 °C

ಚಾಮರಾಜನಗರ: ಒಂದು ಸಾವು, 7 ಹೊಸ ಪ್ರಕರಣ, 20 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಕೋವಿಡ್‌ನಿಂದ ಒಬ್ಬರು ಮೃತಪಟ್ಟಿದ್ದಾರೆ. ಏಳು ಹೊಸ ಪ್ರಕರಣಗಳು ದೃಢಪಟ್ಟಿವೆ. 20 ಮಂದಿ ಗುಣಮುಖರಾಗಿದ್ದಾರೆ. ಹಲವು ತಿಂಗಳ ಬಳಿಕ ಜಿಲ್ಲೆಯಲ್ಲಿ ಇಷ್ಟು ಕಡಿಮೆ ಪ್ರಕರಣ ವರದಿಯಾಗಿರುವುದು ಇದೇ ಮೊದಲು. 

ಚಾಮರಾಜನಗರ ತಾಲ್ಲೂಕಿನ ಕಾಗಲವಾಡಿ ಗ್ರಾಮದ 45 ವರ್ಷದ ಮಹಿಳೆ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಮೃತಪಟ್ಟಿದ್ದಾರೆ. ವಾರದ ಬಳಿಕ ಸಾವಿನ ಪ್ರಕರಣ ವರದಿಯಾಗಿದೆ. 

ಜಿಲ್ಲೆಯಲ್ಲಿ ಇದುವರೆಗೆ 6,157 ಮಂದಿಗೆ ಸೋಂಕು ತಗುಲಿದೆ. 5,899 ಮಂದಿ ಗುಣಮುಖರಾಗಿದ್ದಾರೆ.  ಸದ್ಯ 131 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 85 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 29 ಮಂದಿ ಇದ್ದಾರೆ. 

ಗುರುವಾರ 981 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 976 ಮಂದಿಯ ವರದಿ ನೆಗೆಟಿವ್‌ ಬಂದಿವೆ. ಐದು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಎರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು