ಚಾಮರಾಜನಗರ: ಜಿಲ್ಲೆಯಲ್ಲಿ ಎರಡು ದಿನದ ಅವಧಿಯಲ್ಲಿ 12 ಹೊಸ ಕೋವಿಡ್ ಪ್ರಕರಣ ದೃಢಪಟ್ಟಿವೆ. 19 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.
ಶುಕ್ರವಾರ ಆರು ಮಂದಿಗೆ ಸೋಂಕು ದೃಢಪಟ್ಟಿದ್ದರೆ, ಒಂಬತ್ತು ಮಂದಿ ಗುಣಮುಖರಾಗಿದ್ದರು. ಶನಿವಾರವೂ ಆರು ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. 10 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ
ಸೋಂಕಿನಿಂದ ಚೇತರಿಸಿಕೊಂಡಿರುವವರ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 46ಕ್ಕೆ ಇಳಿದಿದೆ.ಸೋಂಕಿತರಲ್ಲಿ ಇಬ್ಬರು ಐಸಿಯುನಲ್ಲಿದ್ದಾರೆ. 15 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.
ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,393ಕ್ಕೆ ಏರಿದೆ. 31,809 ಮಂದಿ ಗುಣಮುಖರಾಗಿದ್ದಾರೆ. ಎರಡು ದಿನದ ಅವಧಿಯಲ್ಲಿ 3,577 ಮಂದಿಯ ಗಂಟಲು ದ್ರವದ ಪರೀಕ್ಷಾ ವರದಿ ಬಂದಿದ್ದು, 3,555 ಮಂದಿಯ ವರದಿ ನೆಗೆಟಿವ್ ಬಂದು, 12 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.