ಭಾನುವಾರ, ನವೆಂಬರ್ 29, 2020
20 °C

ಹನೂರು: ಜಮೀನಿನಲ್ಲಿ‌ ಬೆಳೆದಿದ್ದ 290 ಕೆಜಿ ಗಾಂಜಾ ವಶ, ಒಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹನೂರು (ಚಾಮರಾಜನಗರ): ತಾಲ್ಲೂಕಿನ ನಾಗರಕಟ್ಟೆ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಗ್ರಾಮದ ವಡಿವೇಲು ಎಂಬುವವನನ್ನು ಶನಿವಾರ ರಾತ್ರಿ ಬಂಧಿಸಿದ್ದಾರೆ. 

ಜಮೀನಿನಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಇನ್‌ಸ್ಪೆಕ್ಟರ್ ರವಿನಾಯಕ್ ಅವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಅಕ್ರಮವಾಗಿ ಗಾಂಜಾ ಬೆಳೆದಿರುವುದು ಕಂಡು ಬಂದಿದೆ. ಒಟ್ಟು 129 ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಗಿಡಗಳ ತೂಕ 290 ಕೆ.ಜಿ.ಗಳಿಷ್ಟಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು