ಸೋಮವಾರ, ಜೂನ್ 27, 2022
21 °C

ಚಾಮರಾಜನಗರ: 424 ಮಂದಿ ಗುಣಮುಖ, 166 ಮಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 424 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 166 ಪ್ರಕರಣಗಳು ದೃಢಪಟ್ಟಿವೆ.

ಸೋಮವಾರ ಸಂಜೆ 6 ಗಂಟೆಯಿಂದ ಮಂಗಳವಾರ ಸಂಜೆ 6 ಗಂಟೆಯವರೆಗಿನ ಅವಧಿಯಲ್ಲಿ  ಒಬ್ಬರು ಮೃತಪಟ್ಟಿದ್ದಾರೆ. 

ಕಡಿಮೆಯಾದ ಪರೀಕ್ಷೆ: ಮಂಗಳವಾರ 697 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 533 ವರದಿಗಳು ನೆಗೆಟಿವ್‌ ಆಗಿವೆ. 164 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಹಳೆಯ ಎರಡು ಪ್ರಕರಣಗಳನ್ನು ಸೇರಿಸಿ ಒಟ್ಟು 166 ಪ್ರಕರಣಗಳನ್ನು ಜಿಲ್ಲಾಡಳಿತ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇನ್ನೂ 80 ಮಂದಿ ಸೋಂಕಿತರ ವಿವರಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಅದು ಹೇಳಿದೆ. 

ಮಂಗಳವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 26,856ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 23,625ಕ್ಕೆ ಏರಿದೆ. ಸೋಂಕು ಮುಕ್ತರಾಗಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, ಸದ್ಯ 2,794 ಮಂದಿ ಸೋಂಕಿತರು ಇದ್ದಾರೆ. ಈ ಪೈಕಿ 684 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 58 ಮಂದಿ ಐಸಿಯುನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಆರೈಕೆ ಪಡೆಯುತ್ತಿದ್ದಾರೆ. 

ಮಂಗಳವಾರ ಗುಣಮುಖರಾದವರಲ್ಲಿ ಆರು ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 113 ಮಂದಿ ಕೋವಿಡ್‌ ಕೇರ್‌ ಕೇಂದ್ರಗಳಿಂದ ಮನೆಗೆ ವಾಪಸ್‌ ಆಗಿದ್ದಾರೆ. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ 305 ಮಂದಿ ಸೋಂಕು ಮುಕ್ತರಾಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು