ಶನಿವಾರ, ಜುಲೈ 24, 2021
23 °C

ಪರೀಕ್ಷೆ ರದ್ದತಿಗೆ ಆಗ್ರಹಿಸಿ ಆನ್‌ಲೈನ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕೋವಿಡ್‌–19 ಕಾರಣದಿಂದ ಸಿಇಟಿ ಮುಂದೂಡುವಂತೆ, ಪದವಿ, ಎಂಜಿನಿಯರಿಂಗ್‌ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಅಂತಿಮ ವರ್ಷದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ಜಿಲ್ಲಾ ಘಟಕದ ಪ್ರತಿನಿಧಿಗಳು ಗುರುವಾರ  ಆನ್‌ಲೈನ್‌ ಪ್ರತಿಭಟನೆ ನಡೆಸಿದರು. 

ಪರೀಕ್ಷೆಗಳನ್ನು ರದ್ದುಪಡಿಸುವಂತೆ ಹಾಗೂ ಈಗಾಗಲೇ ಕಟ್ಟಿಸಿಕೊಂಡಿರುವ ಪರೀಕ್ಷಾ ಶುಲ್ಕವನ್ನು ಮರುಪಾವತಿ ಮಾಡುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಭಾನುವಾರ ಆನ್‌ಲೈನ್‌ ಪ್ರತಿಭಟನೆ ಹಮ್ಮಿಕೊಳ್ಳಲು ಅಖಿಲ ಭಾರತ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ನಿರ್ಧರಿಸಿತ್ತು.

‘ಸಂಘಟನೆಯ ರಾಜ್ಯ ಸಮಿತಿಯ ಸೂಚನೆಯಂತೆ ಜಿಲ್ಲೆಯ ನೂರಾರು ಪಿಯುಸಿ, ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಪ್ರತಿಭಟನೆಯಲ್ಲಿ ಭಾಗವಹಿಸಿ, ತಮ್ಮ ಮನವಿಯನ್ನು ಸಾಮಾಜಿಕ ಜಾಲತಾಣಗಳು, ಮತ್ತು ಇ- ಮೇಲ್ ಮೂಲಕ, ಮುಖ್ಯಮಂತ್ರಿಗಳು ಸೇರಿದಂತೆ ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳು, ಪರೀಕ್ಷಾ ಮಂಡಳಿ ಮತ್ತು ವಿಶ್ವವಿದ್ಯಾಲಯಗಳಿಗೆ ಸಲ್ಲಿಸಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಸಂಚಾಲಕಿ ಆಸೀಯಾ ಬೇಗಂ ಅವರು ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು