ಸರ್ಕಾರಿ ಉದ್ಯೋಗ ನೀಡುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಸೇರಿದಂತೆ ಶಾಸಕರು ಜಿಲ್ಲಾಡಳಿತದ ಶ್ರಮ ಹೆಚ್ಚಿದೆ
ಡಾ.ಎಚ್.ಜಿ.ಮಂಜುನಾಥ್ ಸಿಮ್ಸ್ ಡೀನ್
‘ಸಂತ್ರಸ್ತರ ಪರ ಜಿಲ್ಲಾಡಳಿತ’ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಸಿಗಬೇಕು ಎಂಬ ನಿಟ್ಟಿನಲ್ಲಿ ಜಿಲ್ಲಾಡಳಿತ ಸಂತ್ರಸ್ತರ ಜೊತೆ ನಿರಂತರ ಸಭೆಗಳನ್ನು ನಡೆಸಿ ಸರ್ಕಾರಕ್ಕೆ ಹಲವು ಬಾರಿ ಪ್ರಸ್ತಾವ ಸಲ್ಲಿಸಿತ್ತು. ಅದರಂತೆ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡುವ ಪ್ರಕ್ರಿಯೆಗಳು ನಡೆಯುತ್ತಿದ್ದು ಶೀಘ್ರ ಅರ್ಜಿ ಸಹಿತ ಅಗತ್ಯ ದಾಖಲಾತಿಗಳನ್ನು ಸಂಗ್ರಹಿಸಿ ಬೆಳಗಾವಿಯಲ್ಲಿ ನಡೆಯಲಿರುವ ಗವರ್ನಿಂಗ್ ಕೌನ್ಸಿಲ್ ಸಭೆಯಲ್ಲಿ ಮಂಡಿಸಲು ಪೂರಕವಾಗಿ ಸಲ್ಲಿಸಲಾಗುವುದು. ಅರ್ಜಿಯೊಂದಿಗೆ ಸಲ್ಲಿಸಲು ಕೋರಿರುವ ದಾಖಲಾತಿಗಳನ್ನು ಪಡೆದುಕೊಳ್ಳಲು ಸಂತ್ರಸ್ತರಿಗೆ ಜಿಲ್ಲಾಡಳಿತ ನೆರವು ನೀಡುತ್ತಿದೆ.
ಸಿ.ಟಿ.ಶಿಲ್ಪಾನಾಗ್ ಜಿಲ್ಲಾಧಿಕಾರಿ
‘ಭರವಸೆ ಮೂಡಿದೆ’ ನಾಲ್ಕು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡು ಜೀವನ ನಿರ್ವಹಣೆ ಕಷ್ಟವಾಗಿತ್ತು. ಕೊನೆಗೂ ಹೋರಾಟಕ್ಕೆ ಫಲ ಸಿಗುವ ಭರವಸೆ ಮೂಡಿದೆ. ವರ್ಷದ ಆರಂಭದಲ್ಲಿ ನೇಮಕಾತಿ ಪತ್ರ ನೀಡಬೇಕು. ದುರಂತದ ನಡೆದ ದಿನದಿಂದಲೂ ಸಂತ್ರಸ್ತರ ಕುಟುಂಬಗಳ ಪರವಾಗಿ ನಿಂತ ಎಸ್‌ಡಿಪಿಐ ಸಂಘ ಸಂಸ್ಥೆಗಳು ಹಾಗೂ ಜಿಲ್ಲಾಡಳಿತಕ್ಕೆ ಆಭಾರಿಯಾಗಿದ್ದೇನೆ.